ಧರ್ಮಸ್ಥಳಕ್ಕೆ ಭೇಟಿ ನೀಡಿದ ಮೋದಿಗೆ ಪೂರ್ಣ ಕುಂಭ ಸ್ವಾಗತ

ಬೆಳ್ತಂಗಡಿ : ಪ್ರಧಾನಿ ನರೇಂದ್ರ ಮೋದಿ ಭಾನುವಾರ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥ ಸ್ವಾಮಿಯ ದರ್ಶನ ಪಡೆದಿದ್ದಾರೆ. ಮೋದಿ ಭಾನುವಾರ ಮಂಗಳೂರಿನ ವಿಮಾನ ನಿಲ್ದಾಣದಲ್ಲಿ ಬಂದಿಳಿಯುತ್ತಿದ್ದಂತೆ ಕೇಂದ್ರ ಸಚಿವ ಡಿ.ವಿ ಸದಾನಂದಗೌಡ, ಅನಂತ್‌ ಕುಮಾರ್‌, ಸಚಿವ ಯು.ಟಿ ಖಾದರ್‌, ಮೇಯರ್‌ ಕವಿತಾ ಸೇರಿದಂತೆ ಹಲವರು ಮೋದಿಯವರನ್ನು ಆತ್ಮೀಯವಾಗಿ ಸ್ವಾಗತಿಸಿದ್ದಾರೆ.

ಬಳಿಕ ದೇವಾಲಯದ ಬಳಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ, ಹಾಗೂ ಮಾಜಿ ಸಿಎಂ ಯಡಿಯೂರಪ್ಪ ಮೋದಿ ಅವರನ್ನು ಬರಮಾಡಿಕೊಂಡರು. ಸುಮಾರು 20 ನಿಮಿಷಗಳ ಕಾಲ ದೇವಾಲಯದಲ್ಲಿದ್ದ ಮೋದಿ, ಮಂಜುನಾಥನಿಗೆ ನಾಲ್ವರು ಅರ್ಚಕರ ನೇತೃತ್ವದಲ್ಲಿ ರುದ್ರಾಭಿಷೇಕ ಹಾಗೂ ವಿಶೇಷ ಪೂಜೆ ಸಲ್ಲಿಸಿದರು.

ಸದ್ಯ ಉಜಿರೆಯಲ್ಲಿ ನಡೆಯುತ್ತಿರುವ ರುಪೆ ಕಾರ್ಡ್‌ ವಿತರಣೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ.

 

 

Leave a Reply

Your email address will not be published.