ಮೋದಿಯಷ್ಟು ಹೊಲಸು ರಾಜಕೀಯ ಮಾಡಲು ಯಾರಿಂದಲೂ ಸಾಧ್ಯವಿಲ್ಲ : ಸಿಎಂ

ಮೈಸೂರು : ಮುಂಬರುವ ವಿಧಾನ ಸಭಾ ಚುನಾವಣೆಯಲ್ಲಿ ನಾನು ಚಾಮುಂಡೇಶ್ವರಿ ಕ್ಷೇತ್ರದಿಂದ ಕಣಕ್ಕಿಳಿಯುವುದು ತಿಳಿದೇ ಇದೆ. ಈಗ ಎಲ್ಲರೂ ಒಂದಾಗಿ ನನ್ನ ವಿರುದ್ಧ ತೊಡೆ ತಟ್ಟುತ್ತಿದ್ದಾರೆ.  ಅವರೆಲ್ಲರಿಗೂ ನನ್ನ ಕಂಡರೆ ಭಯ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಸದಾ ಎಲ್ಲರೂ ನನ್ನನ್ನೇ ಟಾರ್ಗೆಟ್‌ ಮಾಡುತ್ತಾರೆ. ನಾನು ವೀಕ್‌ ಇದ್ದಿದ್ದರೆ ನನ್ನ ವಿರುದ್ಧ ಯಾರೂ ಮಾತಾಡುತ್ತಿರಲಿಲ್ಲ. ರಾಜ್ಯದ ಜನ ನನ್ನ ಪರವಾಗಿದ್ದಾರೆ . ಆದ್ದರಿಂದ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಎಲ್ಲರೂ ಒಂದಾಗಿ ನನ್ನ ವಿರುದ್ದ ತೊಡ ತಟ್ಟಿದ್ದಾರೆ. ನನ್ನನ್ನು ಸೋಲಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಸಿಎಂ ಹೇಳಿದ್ದಾರೆ.

ಆದರೆ ನನ್ನನ್ನು ಸೋಲಿಸಲು ಯಾರಿಂದಲೂ ಸಾಧ್ಯವಿಲ್ಲ. ಬಿಜೆಪಿಯವರು ಡರ್ಟಿ ಪಾಲಿಟಿಕ್ಸ್ ಮಾಡುತ್ತಿದ್ದಾರೆ. ಬಿಜೆಪಿಯವರು ಕೊಳಕು ಮನಸ್ಥಿತಿಯವರು. ಅವರಿಗೆ ಕಾಂಗ್ರೆಸ್‌ ಆಡಳಿತ ಸಹಿಸಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ಹೀಗೆಲ್ಲ ಮಾಡುತ್ತಿದ್ದಾರೆ.ಮೋದಿಗೆ ಆರೋಪ ಮಾಡೋದೇ ಕೆಲಸವಾಗಿಬಿಟ್ಟಿದೆ. ಅವರಷ್ಟು ಹೊಲಸು ರಾಜಕೀಯ ಮಾಡಲು ಯಾರಿಂದಲೂ ಸಾಧ್ಯವಿಲ್ಲ ಎಂದಿದ್ದಾರೆ.

Leave a Reply

Your email address will not be published.