ಹಿರಿಯೂರಿನ ಗೊರವರ ಮೈಲಾರಪ್ಪ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ

ಚಿತ್ರದುರ್ಗ : ಆತ ಪವಾಡದ ಗೊರವಪ್ಪ, ಕೈಯಲ್ಲಿ ಡಮರುಗ ಹಿಡಿದು ಹೆಜ್ಜೆ ಹಾಕುತ್ತಿದ್ದರೇ ಅಲ್ಲಿ ಭಕ್ತರ ಮೈಮನಗಳು ತಲ್ಲಣಗೊಳ್ಳುತ್ತವೆ. ತಮ್ಮ ಭಕ್ತಿಯಿಂದ ಸಹಸ್ರಾರು ಭಕ್ತರನ್ನು ಒಂದೆಡೆ ಸೇರಿಸುವ ಶಕ್ತಿ ಪಡೆದಿರುವ ಚಿತ್ರದುರ್ಗ ಜಿಲ್ಲೆ ಹಿರಿಯೂರು ಪಟ್ಟಣದ ಪವಾಡದ ಮೈಲಾರಪ್ಪ ಅವರಿಗೆ 2017 ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಚಿತ್ರದುರ್ಗ ಜಿಲ್ಲೆ ಅಷ್ಟೇ ಅಲ್ಲದೆ ದಾವಣಗೆರೆ, ಶಿವಮೊಗ್ಗ, ಬಳ್ಳಾರಿ, ತುಮಕೂರು, ಮೈಸೂರು, ಬೆಂಗಳೂರು, ಹಾವೇರಿ, ಹೀಗೆ ಎಲ್ಲಾ ಕಡೆ ತನ್ನ ಪವಾಡವನ್ನು ಮಾಡಿ ತೊರಿಸಿದ್ದಾರೆ. ತನ್ನ ಆರಾಧ್ಯ ದೈವ ಮೈಲಾರಲಿಂಗೇಶ್ವರ ಸ್ವಾಮಿಯನ್ನೇ ನಂಬಿ ಜೀವನ ಸಾಗಿಸುತ್ತಿದ್ದಾರೆ. ನಾಲಿಗೆಯಲ್ಲಿ ತ್ರಿಶೂಲ, ಕೈಯಲ್ಲಿ ಪಂಚ ತ್ರಿಶೂಲವನ್ನು ಚುಚ್ಚಿಕೊಂಡು ಬೆಂಕಿ ಹಚ್ಚಿಕೊಂಡು ದೇವರಿಗೆ ಅರ್ಪಿಸುವ ಅವರ ಪವಾಡಕ್ಕೆ ಸರಿಸಾಟಿ ಇಲ್ಲ. ಇದೀಗ ಅನಾರೋಗ್ಯದಿಂದ ಬಳಲುತ್ತಿದ್ದರೂ ತಮ್ಮ ಕಾಯಕ ಬಿಟ್ಟಿಲ್ಲ. ಗೊರವಪ್ಪಗೆ ದೇಹದ ನರಗಳಲ್ಲಿ ನಿಶ್ಯಕ್ತಿ ಕಾಣಿಸಿಕೊಂಡು ಹಾಸಿಗೆ ಹಿಡಿದಿದ್ದರು.

ಪವಾಡದ ಮೈಲಾರಪ್ಪ ಅಂದ್ರೆ ಸಾಕು ಅಲ್ಲಿ ಗೊರವರ ಕುಣಿತ ಭವ್ಯತೆ ಕಂಡು ಬರುತ್ತದೆ. ಎಲ್ಲರಲ್ಲಿಯೂ ಇವರ ಕುಣಿತ ರೋಮಾಂಚನಗೊಳಿಸುತ್ತದೆ. ಮೈಸೂರು ದಸರಾದಲ್ಲಿಯೂ ತನ್ನ ಜಾನಪದ ಕುಣಿತವನ್ನು ಮೇಳೈಸಿದ ಕಲಾವಿದ ಏಳುಕೋಟಿ, ಏಳುಕೋಟಿ ಏಳುಕೋಟ್ಯೋ ಚಾಂಗಮಲೋ ಚಾಂಗಮಲೋ ಎಂದು ಕೂಗುತ್ತಲೇ ತಮ್ಮ ಶಕ್ತಿಯನ್ನು ತೋರಿಸುತ್ತಾರೆ.

ಹಾಲುಮತ ಕುರುಬ ಸಮುದಾಯದ ಮೈಲಾರಪ್ಪನಲ್ಲಿ ಇದೀಗ ಆ ಶಕ್ತಿ ಇಲ್ಲದಾಗಿದ್ದರೂ ದೋಣಿ ಸೇವೆಯಲ್ಲಿ ಕುಣಿದು ಕುಪ್ಪಳಿಸುತ್ತಿದ್ದ ಆ ಕಾಲುಗಳು, ಡಮರುಗ ಹಿಡಿದು ಎಲ್ಲರ ಮೈ ನವಿರೇಳುಸುತ್ತವೆ. ಹಾಲು, ಹಣ್ಣು, ತುಪ್ಪ, ಸಕ್ಕರೆ, ಹೀಗೆ  ಪಂಚಾಮೃತವನ್ನು ನೀಡುತ್ತಿದ್ದ ಮೈಲಾರಪ್ಪನ ದೋಣಿಯನ್ನು ನಂಬಿದ್ದಾರೆ.
ಕರಿಯ ಕಂಬಳಿಯಿಂದ ಮಾಡಿದ ಅಂಗಿ. ಕೈಯಲ್ಲಿ ಕೊಳಲು. ಡಮರುಗ. ತ್ರಿಶೂಲ, ಭಂಡಾರದ ಬಟ್ಟಲು. ದೋಣಿ ಹಿಡಿದು ಸದಾ ಕಾಲವೂ ಗೊರವರ ಕುಣಿತವನ್ನೇ ನಂಬಿದ್ದಾರೆ ಪತ್ನಿ ಅಂಭಾದೇವಿ ಮತ್ತು ಮಗಳು ನೀತಾ ಜತೆ ಹಿರಿಯೂರಿನಲ್ಲಿ ವಾಸಿಸುತ್ತಿದ್ದಾರೆ.

ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿರುವ ಗೊರವಯ್ಯ ಮೈಲಾರಪ್ಪ ಅವರಿಗೆ ಕರ್ನಾಟಕ ಜಾನಪದ ಪರಿಷತ್ತು ಜಿಲ್ಲಾಧ್ಯಕ್ಷ ಡಾ. ಕರಿಯಪ್ಪ ಮಾಳಿಗೆ ಹಾಗೂ ಕಸಾಪ ಗೌರವ ಕಾರ್ಯದರ್ಶಿ ಮಾಲತೇಶ್ ಅರಸ್ ಹರ್ತಿಕೋಟೆ, ಉಪನ್ಯಾಸಕ ಡಾ.ಲೇಪಾಕ್ಷ ಅವರು ಅಭಿನಂದಿಸಿದ್ದಾರೆ

ವಿಳಾಸ : ಗೊರವರ ಮೈಲಾರಪ್ಪ ತಂದೆ ನಿಂಗಪ್ಪ. ಮಿರ್ಜಾ ಬಡಾವಣೆ, ಮಟನ್ ಮಾರ್ಕೆಟ್ ಹಿಂಭಾಗ ಹಿರಿಯೂರು ಪಟ್ಟಣ. ಚಿತ್ರದುರ್ಗ ಜಿಲ್ಲೆ .
9663271335/ 9901284507..

Leave a Reply

Your email address will not be published.

Social Media Auto Publish Powered By : XYZScripts.com