ಇಟಲಿಯಲ್ಲಿ ಜನಾಂಗೀಯ ಹಲ್ಲೆಗೊಳಗಾದ ಭಾರತೀಯ ವಿದ್ಯಾರ್ಥಿಗಳು

ದೆಹಲಿ : ಇಟಲಿಯಲ್ಲಿ ಭಾರತೀಯ ವಿದ್ಯಾರ್ಥಿಗಳ ಮೇಲೆ ಜನಾಂಗೀಯ ಹಲ್ಲೆ ನಡೆದಿದೆ. ಈ ವಿಚಾರ ಇಟಲಿಯಲ್ಲಿರುವ ಭಾರತೀಯ ದೂತಾವಾಸ ಕಚೇರಿಗೆ ತಿಳಿದುಬಂದಿದ್ದು, ಅಪಾಯದಲ್ಲಿ ಸಿಲುಕಿರುವವರ ರಕ್ಷಣೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.

ಘಟನೆ ಕುರಿತು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್‌ ವರದಿಯನ್ನು ತರಿಸಿಕೊಂಡಿದ್ದು, ತಾವೇ ಖುದ್ದಾಗಿ ಪ್ರಕರಣವನ್ನು ಪರಿಶೀಲಿಸುತ್ತಿರುವುದಾಗಿ ಸುಷ್ಮಾ ಸ್ವರಾಜ್‌ ಹೇಳಿದ್ದಾರೆ.

ಈ ಕುರಿತು ಸುಷ್ಮಾ ಸ್ವರಾಜ್‌ ಟ್ವೀಟ್‌ ಮಾಡಿದ್ದು, ಇಟಲಿಯಲ್ಲಿರುವ ವಿದ್ಯಾರ್ಥಿಗಳು ಭಯಪಡುವ ಅಗತ್ಯವಿಲ್ಲ. ಈ ಘಟನೆ ಕುರಿತು ಇಟಲಿಯ ಉನ್ನತ ಅಧಿಕಾರಿಗಳ ಗಮನಕ್ಕೆ ತರಲಾಗಿದೆ. ಭಾರತೀಯ ವಿದ್ಯಾರ್ಥಿಗಳಿಗೆ ರಕ್ಷಣೆ ನೀಡುವುದಾಗಿ ಅವರು ಭರವಸೆ ನೀಡಿದ್ದಾಗಿ ಹೇಳಿದ್ದಾರೆ.

ಅಲ್ಲದೆ ಭಾರತೀಯ ವಿದ್ಯಾರ್ಥಿಗಳ ಮೇಲೆ ದಾಳಿ ನಡೆದ ಸ್ಥಳ ಯಾವುದೆಂದು ಗುರುತಿಸಿ ಹೇಳಬೇಕೆಂದು ಕೇಳಿದ್ದು, ಆ ಜಾಗಕ್ಕೆ ಯಾರೂ ತೆರಳದಂತೆ ಸೂಚಿಸಿದ್ದಾರೆ. ಜೊತೆಗೆ ಭಾರತೀಯ ವಿದ್ಯಾರ್ಥಿಗಳೆಲ್ಲರೂ ಪರಸ್ಪರ ಸಂಪರ್ಕದಲ್ಲಿದ್ದು, ಏನೇ ತೊಂದರೆಯಾದರೂ ರಾಯಭಾರ ಕಚೇರಿಯನ್ನು ಸಂಪರ್ಕಿಸುವಂತೆ ತಿಳಿಸಲಾಗಿದೆ.

 

Leave a Reply

Your email address will not be published.

Social Media Auto Publish Powered By : XYZScripts.com