ಉತ್ತರ ಪ್ರದೇಶದ ಉಷ್ಣವಿದ್ಯುತ್‌ ಸ್ಥಾವರದಲ್ಲಿ ಬಾಯ್ಲರ್‌ ಸ್ಫೋಟ : 13 ಮಂದಿ ಸಾವು

ಲಖನೌ : ಉತ್ತರ ಪ್ರದೇಶದ ರಾಯ್‌ ಬರೇಲಿಯಲ್ಲಿ ಉಷ್ಣ ವಿದ್ಯುತ್‌ ಸ್ಥಾವರದ ಘಟಕದಲ್ಲಿ ಬಾಯ್ಲರ್‌ ಸ್ಫೋಟಗೊಂಡಿದ್ದು, ಘಟನೆಯಲ್ಲಿ 13 ಮಂದಿ ಸಾವಿಗೀಡಾಗಿದ್ದಾರೆ. ಈ ಉಷ್ಣ ವಿದ್ಯುತ್‌ ಸ್ಥಾವರದಲ್ಲಿ 500 ಮೆಗಾವ್ಯಾಟ್‌ ವಿದ್ಯುತ್‌ ಉತ್ಪಾದಿಸಲಾಗುತ್ತಿತ್ತು. ಈ ವೇಳೆ ಬಾಯ್ಲರ್‌ ಸ್ಫೋಟಗೊಂಡು 13 ಮಂದಿ ಕಾರ್ಮಿಕರು ಸಾವಿಗೀಡಾಗಿದ್ದಾರೆ. 100ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿದ್ದು, ಸಾವಿನ ಸಂಖ್ಯೆ ಹೆಚ್ಚುವ ಸಾಧ್ಯತೆ ಇರುವುದಾಗಿ ಹೇಳಲಾಗುತ್ತಿದೆ.

ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌ ಮಾರಿಷಸ್‌ ಪ್ರವಾಸದಲ್ಲಿದ್ದು, ದೂರವಾಣಿ ಮುಖಾಂತರ ಘಟನೆಯ ಮಾಹಿತಿ ಪಡೆದಿದ್ದಾರೆ. ಜೊತೆಗೆ ಗಾಳಾಳುಗಳಿಗೆ ಅಗತ್ಯ ಚಿಕಿತ್ಸೆ ನೀಡುವಂತೆ ಜಿಲ್ಲಾಡಳಿತಕ್ಕೆ ಸೂಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಜೊತೆಗೆ ದುರಂತದಲ್ಲಿ ಮೃತಪಟ್ಟವರಿಗೆ ತಲಾ 2 ಲಕ್ಷ ಹಾಗೂ ಗಂಭೀರವಾಗಿ ಗಾಯಗೊಂಡವರಿಗೆ ತಲಾ 50 ಸಾವಿರ ಪರಿಹಾರ ಘೋಷಿಸಲಾಗಿದೆ.

Leave a Reply

Your email address will not be published.