ಎಚ್‌.ಡಿ ಕೋಟೆಯ ಜೆಡಿಎಸ್ ಶಾಸಕ ಚಿಕ್ಕಮಾದು ವಿಧಿವಶ

ಮೈಸೂರು :ತೀವ್ರ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಎಚ್‌.ಡಿ ಕೋಟೆಯ ಜೆಡಿಎಸ್‌ ಶಾಸಕ ಚಿಕ್ಕಮಾದು ವಿಧಿವಶರಾಗಿದ್ದಾರೆ. ಕಳೆದ ಮಧ್ಯರಾತ್ರಿ 2 ಗಂಟೆಯ ಸುಮಾರಿಗೆ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದಾರೆ ಎಂದು ತಿಳಿದುಬಂದಿದೆ.

ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ಚಿಕ್ಕಮಾದು ಅವರನ್ನು ಮೈಸೂರಿನ ಅರವಿಂದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಒಂದು ವರ್ಷದಿಂದ ಅವರು ಬಹುಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದರು ಎಂದು ಕುಟುಂಬದ ಮೂಲಗಳು ತಿಳಿಸಿವೆ. ಚಿಕ್ಕಮಾದು ಹಿರಿಯ ಪತ್ನಿ ಜಯಮ್ಮ, ಮತ್ತು ಕಿರಿಯ ಪತ್ನಿ ನಾಗಮ್ಮ. ಮತ್ತು ನಾಲ್ವರು ಮಕ್ಕಳನ್ನು ಅಗಲಿದ್ದಾರೆ.

ಜೀವನ 
ಕೆ ಆರ್ ನಗರ ತಾ, ಹೊಸೂರು ಕಲ್ಲಹಳ್ಳಿಯಲ್ಲಿ ಚಿಕ್ಕಮಾದು ಜನಿಸಿದ್ದರು. ಕೆಲ ವರ್ಷಗಳ ಕಾಲ ರಾಮೇನಹಳ್ಳಿಯಲ್ಲಿ ವಾಸವಿದ್ದು, ಬಳಿಕ ಮೈಸೂರಿಗೆ ಶಿಫ್ಟ್‌ ಆಗಿದ್ದರು. 1978ರಲ್ಲಿ ಇವರು ರಾಜಕೀಯ ಪ್ರವೇಶ ಮಾಡಿ, ದೇವರಾಜ ಅರಸು ಅವರ ನೇತೃತ್ವದಲ್ಲಿ ಬಿಳಿಕೆರೆ ಜಿ.ಪಂಚಾಯತ್‌ ಸದಸ್ಯರಾಗಿ ಆಯ್ಕೆಯಾಗಿದ್ದರು. ಬಳಿಕ 1991ರಲ್ಲಿ ಕಾಂಗ್ರೆಸ್‌ನಿಂದ ಹುಣಸೂರು ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದರು. 2007-08ರಲ್ಲಿ ಜೆಡಿಎಸ್‌ನಿಂದ ಎಂಎಲ್‌ಸಿ ಯಾಗಿ, 2013ರಲ್ಲಿ ಎಚ್‌.ಡಿ ಕೋಟೆ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದರು. ದಲಿತ ಸಂಘರ್ಷ ಸಮಿತಿಯ ಮುಂಚೂಣಿ ನಾಯಕರಾಗಿ ಕೆಲಸ ಮಾಡಿದ್ದರು.

 

 

Leave a Reply

Your email address will not be published.

Social Media Auto Publish Powered By : XYZScripts.com