ಸರ್ಕಾರಿ ಆಸ್ಪತ್ರೆಗಳನ್ನು ಸರಿ ಮಾಡಲು ತಾಕತ್ತಿಲ್ಲದ ಸಿಎಂ, ಖಾಸಗಿ ಆಸ್ಪತ್ರೆಗಳ ವಿರುದ್ಧ ಕಾನೂನು ಮಾಡ್ತಿದ್ದಾರೆ : ಶೋಭಾ

ಬೆಂಗಳೂರು : ಸರ್ಕಾರಿ ಆಸ್ಪತ್ರೆಗಳನ್ನು ಸರಿ ಮಾಡಲು ತಾಕತ್ತಿಲ್ಲದ ಸಿದ್ದರಾಮಯ್ಯ ಸರ್ಕಾರ ಖಾಸಗಿ ಆಸ್ಪತ್ರೆಗಳ ವಿರುದ್ದ ಕಾನೂನು ತರಲು ಹೊರಟಿದ್ದಾರೆ ಎಂದು ಸಂಸದೆ ಶೋಭಾ ಕರಂದ್ಲಾಜೆ ವ್ಯಂಗ್ಯವಾಡಿದ್ದಾರೆ.

ನವ ಕರ್ನಾಟಕ ಪರಿವರ್ತನಾ ಯಾತ್ರೆಯ ಎರಡನೇ ದಿನವಾದ ಇಂದು, ಯಾತ್ರೆಗೂ ಮುನ್ನ ಮಾತನಾಡಿದ ಶೋಭಾ, ಮೊದಲು ಸರ್ಕಾರಿ ಆಸ್ಪತ್ರೆಗಳನ್ನು ಸರಿ ಮಾಡಿ. ಸಚಿವ ರಮೇಶ್‌ ಕುಮಾರ್‌ ಅವರು ಸರಿಯಾಗಿ ಕೆಲಸ ಮಾಡುತ್ತಿಲ್ಲ. ಅವರ ವಿರುದ್ದ ಮೂರನೇ ಬಾರಿ ಪ್ರತಿಭಟನೆ ನಡೆಯುತ್ತಿದೆ. ರೋಗಿಗಳು ಮಾಡಿರುವ ತಪ್ಪಾದರೂ ಏನು ?. ಎಂದು ಪ್ರಶ್ನಿಸಿದ್ದಾರೆ.

ಇದೇ ವೇಳೆ ಪರಿವರ್ತನಾ ಯಾತ್ರೆ ಕುರಿತು ಮಾತನಾಡಿದ ಶೋಭಾ ಕರಂದ್ಲಾಜೆ, ನಮ್ಮ ಯಾತ್ರೆ ನೋಡಿ ಸಿದ್ದರಾಮಯ್ಯ ನಡುಗುತ್ತಿದ್ದಾರೆ. ಯಾತ್ರೆಯನ್ನು ಹತ್ತಿಕ್ಕುವ ಪ್ರಯತ್ನ ಮಾಡುತ್ತಿದ್ದಾರೆ. ಎಲ್ಲೆಲ್ಲಿ ಯಾತ್ರೆಗೆ ಅನುಮತಿ ನೀಡುವುದಿಲ್ಲವೋ ಸ್ಥಳದಲ್ಲೇ ಬಿಎಸ್‌ವೈ ನೇತೃತ್ವದಲ್ಲಿ ಪ್ರತಿಭಟನೆ ನಡಸುವುದಾಗಿ ಹೇಳಿದ್ದಾರೆ.

 

Leave a Reply

Your email address will not be published.

Social Media Auto Publish Powered By : XYZScripts.com