ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿಎಂ ವಿರುದ್ಧ ನಿಂತ ಬಿಜೆಪಿ ಅಭ್ಯರ್ಥಿ ಹೆಸರು ಕೇಳಿದ್ರೆ ಹುಬ್ಬೇರಿಸ್ತೀರಾ.!

ರಾಜ್ಯದಲ್ಲಿ 2018ರ ವಿಧಾನ ಸಭಾ ಚುನಾವಣೆಗೆ ಪ್ರಮುಖ ಮೂರೂ ಪಕ್ಷಗಳು ತಯಾರಿ ನಡೆಸಿವೆ. ರಾಜ್ಯದಲ್ಲಿ ಬಿಜೆಪಿ ಪಕ್ಷವನ್ನು ಅಧಿಕಾರಕ್ಕೆ ತರಲೇಬೇಕೆಂಬ ಹಠ ಹೊತ್ತಿರುವ ಬಿಜೆಪಿ ಎಲ್ಲಿಲ್ಲದ ಪ್ರಯತ್ನ ನಡೆಸುತ್ತಿದೆ. ಮತ್ತೊಂದೆಡೆ ಬಿಜೆಪಿಗೆ ಪೈಪೋಟಿ ನೀಡಲು ಕಾಂಗ್ರೆಸ್‌ ಪಣ ತೊಟ್ಟಿದೆ.

ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿಎಂ ಸಿದ್ದರಾಮಯ್ಯ ಕಣಕ್ಕಿಳಿಯಲಿದ್ದಾರೆ ಎಂಬ ವಿಷಯ ತಿಳಿದೇ ಇದೆ. ಇನ್ನು ಸಿಎಂ ಪುತ್ರ ಯತೀಂದ್ರ ಸಹ ವರುಣ ಕ್ಷೇತ್ರದಿಂದ ಸ್ಪರ್ಧೆ ನಡೆಸಲಿದ್ದಾರೆ. ಆದರೆ ಸಿದ್ದರಾಮಯ್ಯ ಅವರನ್ನು ಸೋಲಿಸಲು ಬಿಜೆಪಿ ರಣತಂತ್ರ ರೂಪಿಸಿ ಖ್ಯಾತ ಗಾಯಕ ವಿದ್ಯಾಭೂಷಣ ಅವರನ್ನು ಕಣಕ್ಕಿಳಿಸಲು ಸಿದ್ಧತೆ ನಡೆಸಿದೆ ಎಂದು ಮೂಲಗಳು ತಿಳಿಸಿವೆ.

ಈ ಕುರಿತು ಬಿಜೆಪಿಯ ನಾಯಕರು ವಿದ್ಯಾಭೂಷಣರ ಜೊತೆ ಒಂದು ಸುತ್ತಿನ ಮಾತುಕತೆ ನಡೆಸಿದ್ದಾರೆ ಎನ್ನಲಾಗುತ್ತಿದೆ. ಆದರೆ ಬಿಜೆಪಿ ಇದುವರೆಗೂ ಯಾವುದೇ ಸುಳಿವು ಬಿಟ್ಟುಕೊಟ್ಟಿಲ್ಲ. ಅಲ್ಲದೆ ವಿದ್ಯಾಭೂಷಣರೂ ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಎಂದು ಮೂಲಗಳು ತಿಳಿಸಿವೆ.

ಆದರೆ ಈಗಾಗಲೆ ರಾಜಕೀಯದಲ್ಲಿ ಅನುಭವ ಹೊಂದಿರುವ ಸಿಎಂ ಸಿದ್ದರಾಮಯ್ಯ ಹಾಗೂ ಇದುವರೆಗೂ ರಾಜಕೀಯಕ್ಕೇ ಇಳಿಯದ ವಿದ್ಯಾಭೂಷಣರ ಮಧ್ಯೆ ಜಿದ್ದಾಜಿದ್ದಿನ ಸ್ಪರ್ಧೆ ಏರ್ಪಡುವುದಂತೂ ನಿಜ. ಆದರೆ ನಿಜವಾಗಿಯೂ ವಿದ್ಯಾಭೂಷಣರು ಸಿಎಂ ವಿರುದ್ದ ಯುದ್ದಕ್ಕೆ ಇಳಿಯುತ್ತಾರಾ, ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸ್ಪರ್ಧೆ ಏರ್ಪಡುತ್ತದಾ ಎಂಬುದು ಸದ್ಯದಲ್ಲೇ ತಿಳಿಯಲಿದೆ.

Leave a Reply

Your email address will not be published.

Social Media Auto Publish Powered By : XYZScripts.com