ಬಿಜೆಪಿ ನಾಯಕರು ನನಗೆ ಮೋಸ ಮಾಡುತ್ತಾರೆ ಎಂದುಕೊಂಡಿರಲಿಲ್ಲ : ಪ್ರಮೋದ್‌ ಮುತಾಲಿಕ್‌

ಕಲಬುರಗಿ : ಬಿಜೆಪಿ ವಿರುದ್ದ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್‌ ಮುತಾಲಿಕ್‌ ಕಿಡಿಕಾರಿದ್ದಾರೆ. ನನ್ನ ಅವಶ್ಯಕತೆ ಇದ್ದಾಗ ಬಿಜೆಪಿ ನನ್ನನ್ನು ಬಳಸಿಕೊಂಡು, ಹೊಂದಾಣಿಕೆ ಮಾಡಿಕೊಂಡು, ಈಗ ಚುನಾವಣೆಗೆ ಸ್ಪರ್ಧಿಸಲು ಅವಕಾಶ ನೀಡಲಿಲ್ಲ.  ಬಿಜೆಪಿ ನನಗೆ ಮೋಸ ಮಾಡಿದೆ. ಈಗ ಶಿವಸೇನೆ ಜೊತೆ ಸೇರಿ ಬಿಜೆಪಿಗೆ ತಕ್ಕ ಪಾಠ ಕಲಿಸುವುದಾಗಿ ಹೇಳಿದ್ದಾರೆ.

ಕಳೆದ ಬಾರಿ ಬಿಜೆಪಿ ಅಧಿಕಾರಕ್ಕೆ ಬರಲು ಸಾಕಷ್ಟು ಶ್ರಮ ವಹಿಸಿದ್ದೇನೆ. ಶ್ರೀರಾಮಸೇನೆ, ಭಜರಂಗದಳ ಸೇರಿದಂತೆ ಹಿಂದೂ ಸಂಘಟನೆಗಳ ಬೆಂಬಲಕ್ಕಾಗಿ ಸಾಕಷ್ಟು ಕೆಲಸ ಮಾಡಿದ್ದೇನೆ. ಆದರೆ ಬಿಜೆಪಿ ಈಗ ಅದನ್ನು ಮರೆತಿದೆ. ಮುಂದಿನ ಚುನಾವಣೆಯಲ್ಲಿ ನನಗೆ ಟಿಕೆಟ್‌ ನೀಡಲು ಮೀನಾಮೇಷ ಎಣಿಸುತ್ತಿದೆ. ಅದಕ್ಕೆ ಬಿಜೆಪಿಗೆ ಈ ಬಾರಿ ತಕ್ಕ ಪಾಠ ಕಲಿಸುವುದಾಗಿ ಹೇಳಿದ್ದಾರೆ.

Leave a Reply

Your email address will not be published.