ಮಂಗಳೂರು ಮೇಯರ್‌ಗೆ ಪಂಚ್ ಕೊಟ್ಟ ಸಿಎಂ ಸಿದ್ದರಾಮಯ್ಯ!!

ಮಂಗಳೂರು : ಸಿಎಂ ಸಿದ್ದರಾಮಯ್ಯ ಮಂಗಳೂರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಮೇಯರ್ ಕವಿತಾ ಅವರಿಗೆ ಪಂಚ್‌ ನೀಡಿದ್ದಾರೆ. ಈ ವಿಡಿಯೊ ಎಲ್ಲೆಡೆ ಹರಿದಾಡುತ್ತಿದ್ದು, ಜನರನ್ನು ನಗೆಗಡಲಲ್ಲಿ ತೇಲುವಂತೆ ಮಾಡಿದೆ.

ಮಂಗಳೂರು ಮೇಯರ್‌ ಕವಿತಾ ಸನಿಲ್‌ ಕರಾಟೆ ಚಾಂಪಿಯನ್‌ ಆಗಿದ್ದಾರೆ. ಅವರ ನೇತೃತ್ವದಲ್ಲೇ ರಾಷ್ಟ್ರಮಟ್ಟದ ಕರಾಟೆ ಪಂದ್ಯಾವಳಿ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮವನ್ನು ಸಿಎಂ ಉದ್ಘಾಟನೆ ಮಾಡಲು ಆಗಮಿಸಿದ್ದರು. ಈ ವೇಳೆ ಸಿಎಂ ಮಕ್ಕಳು ಕರಾಟೆ ಆಡುವುದನ್ನು ನೋಡಿ ಖುಷಿಪಟ್ಟಿದ್ದಾರೆ. ಈ ವೇಳೆ ಕರಾಟೆ ಚಾಂಪಿಯನ್‌ ಆದ ಕವಿತಾ ಸಿಎಂ ಅವರನ್ನು ಕರಾಟೆ ಆಡಲು ಬರುವಂತೆ ಕರೆದಿದ್ದಾರೆ. ಬಳಿಕ ಕವಿತಾ ಸಿಎಂಗೆ ಕರಾಟೆ ಪಂಚ್‌ ನೀಡಿದ್ದಾರೆ. ಮೇಯರ್ ಏಟಿಗೆ ಸಿಎಂ ಸಿದ್ದರಾಮಯ್ಯ ಸಹ ಪಂಚ್ ನೀಡಿದರು. ಇದನ್ನು ನೋಡಿದ ಜನ ನಗೆಗಡಲಲ್ಲಿ ತೇಲಾಡಿದ್ದಾರೆ.

Leave a Reply

Your email address will not be published.

Social Media Auto Publish Powered By : XYZScripts.com