ಅರುಣಾಚಲ ಪ್ರದೇಶಕ್ಕೆ ರಕ್ಷಣಾ ಸಚಿವೆ ಭೇಟಿ : ಚೀನಾ ಕೆಂಗಣ್ಣಿಗೆ ಗುರಿಯಾಗಿದ್ದೇಕೆ ?

ಬೀಜಿಂಗ್ : ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಅರುಣಾಚಲ ಪ್ರದೇಶಕ್ಕೆ ಭೇಟಿ ನೀಡಿರುವುದಕ್ಕೆ ಚೀನಾ ಆಕ್ಷೇಪ ವ್ಯಕ್ತಪಡಿಸಿದ್ದು, ವಿವಾದಾತ್ಮಕ ಸ್ಥಳಕ್ಕೆ ರಕ್ಷಣಾ ಸಚಿವರು ಭೇಟಿ ನೀಡಿದ್ದು ಸರಿಯಲ್ಲ. ಇದರಿಂದ ವಲಯದ ಶಾಂತಿ ಮತ್ತು ಸೌಹಾರ್ದತೆಗೆ ಭಂಗ ಉಂಟಾಗುತ್ತದೆ ಎಂದು ಚೀನಾ ಹೇಳಿದೆ.

ಅರುಣಾಚಲ ಪ್ರದೇಶಕ್ಕೆ ಭಾರತದ ರಕ್ಷಣಾ ಸಚಿವರು ಭೇಟಿ ನೀಡುವ ಮೊದಲು ಚೀನಾದ ನಿಲುವೇನು ಎಂಬ ಬಗ್ಗೆ ನಿಮಗೆ ಸ್ಪಷ್ಟತೆ ಇರಬೇಕು ಎಂದು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.

ನವೆಂಬರ್‌ 5ರಂದು ನಿರ್ಮಲಾ ಸೀತಾರಾಮನ್‌ ಅರುಣಾಚಲ ಪ್ರದೇಶಕ್ಕೆ ಭೇಟಿ ನೀಡಿದ್ದು, ಸೇನೆಯ ಸನ್ನದ್ದತೆಯ ಪರಿಶೀಲನೆ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಚೀನಾದ ವಿದೇಶಾಂಗ ಇಲಾಖೆ ಆಕ್ಷೇಪ ವ್ಯಕ್ತಪಡಿಸಿದ್ದು, ಈ ರೀತಿ ಭೇಟಿ ನೀಡುವುದು ಶಾಂತಿಗೆ ಪೂರಕವಲ್ಲ ಎಂದಿದೆ.

ಮಾತುಕತೆಗೆ ಪೂರಕವಾದ ವಾತಾವರಣ ನಿರ್ಮಿಸಲು ಭಾರತ -ಚೀನಾದ ಜೊತೆಗೂಡಿ ಕೆಲಸ ಮಾಡಬೇಕಿದೆ. ಆದ್ದರಿಂದ ಚೀನಾದೊಂದಿಗೆ ಭಾರತ ಕೈಜೋಡಿಸಲಿ ಎಂಬುದು ನಮ್ಮ ಉದ್ದೇಶ ಎಂದಿದೆ.

Leave a Reply

Your email address will not be published.

Social Media Auto Publish Powered By : XYZScripts.com