ದಿನಬಳಕೆ ವಸ್ತುಗಳ ಮೇಲಿನ ಜಿಎಸ್‌ಟಿ ಇಳಿಕೆಗೆ ಕೇಂದ್ರದಿಂದ ಚಿಂತನೆ

ದೆಹಲಿ : ದೇಶದಲ್ಲಿ ಜಿಎಸ್‌ಟಿ ಜಾರಿಯಾದ ಬಳಿಕ ದಿನ ಬಳಕೆಯ ವಸ್ತುಗಳ ಮೇಲೆ ಭಾರೀ ಪರಿಣಾಮ ಬೀರಿದೆ. ಸಾಮಾನ್ಯ ಜನರಿಗೆ ಇದರಿಂದ ಹೊರೆಯಾಗುತ್ತಿದೆ ಎಂಬ ಆರೋಪ  ಕೇಳಿಬಂದಿತ್ತು.

ಆದರೆ ಗ್ರಾಹಕರು ಹಾಗೂ ವ್ಯಾಪಾರಿಗಳ ಮನವಿಗೆ ಕೇಂದ್ರ ಸರ್ಕಾರ ಸ್ಪಂದಿಸಿದ್ದು, ದಿನಬಳಕೆಯ ವಸ್ತುಗಳ ಮೇಲಿನ ಜಿಎಸ್‌ಟಿ ಇಳಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

ನವೆಂಬರ್‌ 10 ರಂದು  ಜಿಎಸ್‌ಟಿ ಮಂಡಳಿಯ ಸಭೆ ನಡೆಸಲು ತೀರ್ಮಾನಿಸಿದ್ದು, ಈ ಸಭೆಯಲ್ಲಿ ದಿನಬಳಕೆಯ ವಸ್ತುಗಳಾದ ಪೇಸ್ಟ್‌, ಶ್ಯಾಂಪು, ಪ್ಲಾಸ್ಟಿಕ್‌, ಪೀಠೋಪಕರಣಗಳು ಸೇರಿದಂತೆ ಹಲವು ಉತ್ಪನ್ನಗಳ ಮೇಲಿನ ತೆರಿಗೆಯನ್ನು ಇಳಿಕೆ ಮಾಡುವ  ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಶೇ, 28ರ ಸ್ಲ್ಯಾಬ್‌ನಲ್ಲಿ ಬರುವ ದಿನಬಳಕೆಯ ವಸ್ತುಗಳ ಮೇಲಿನ ತೆರಿಗೆಯನ್ನು ಶೇ.18ಕ್ಕೆ ಇಳಿಸಲು ಚಿಂತನೆ ನಡೆಸಲಾಗಿದೆ.

 

Leave a Reply

Your email address will not be published.

Social Media Auto Publish Powered By : XYZScripts.com