ಬಾಡಿ ಬಿಲ್ಡಿಂಗ್‌ ಶೋ ವೇಳೆ ಕುಸಿದು ಬಿದ್ದು ಸ್ಪರ್ಧಾಳು ಸಾವು…!!

ಮಂಗಳೂರು : ಬಾಡಿ ಬಿಲ್ಡಿಂಗ್‌ ಶೋ ನಡೆಯುತ್ತಿದ್ದ ವೇಳೆ ಸ್ಪರ್ಧಿಯೊಬ್ಬರು ಸ್ಥಳದಲ್ಲೇ ಕುಸಿದು ಬಿದ್ದು ಸಾವಿಗೀಡಾದ ಘಟನೆ ಮಂಗಳೂರಿನಲ್ಲಿ ನಡೆದಿದೆ.

ಮೃತ ವ್ಯಕ್ತಿ ವಿನಯ್‌ರಾಜ್‌ ಎಂದು ತಿಳಿದುಬಂದಿದೆ. ಮಂಗಳೂರಿನ ಡಾನ್ ಬಾಸ್ಕೋ ಹಾಲ್‌ನ್ಲಿ ಭಾನುವಾರ ರಾತ್ರಿ ಜಿಲ್ಲಾ ಮಟ್ಟದ ದೇಹದಾರ್ಡ್ಯ ಸ್ಪರ್ಧೆ ನಡೆಯುತ್ತಿತ್ತು.

ಈ ವೇಳೆ ವಿನಯ್‌ ರಾಜ್‌ ಸಹ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಸ್ಪರ್ಧೆಯಲ್ಲಿ ತಮ್ಮ ದೇಹದಾರ್ಢ್ಯ ಪ್ರದರ್ಶನ ಮಾಡುವ ವೇಳೆ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದು, ಕೂಡಲೆ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ ದಾರಿ ಮಧ್ಯದಲ್ಲೇ ವಿನಯ್‌ ರಾಜ್ ಸಾವಿಗೀಡಾಗಿರುವುದಾಗಿ ಮೂಲಗಳು ತಿಳಿಸಿವೆ.

ಈ ವಿಚಾರ ಎಲ್ಲೆಡೆ ಭಾರೀ ಚರ್ಚೆಗೆ ಒಳಗಾಗುತ್ತಿದ್ದು, ಯಾವ ಕಾರಣದಿಂದ ವಿನಯ್‌ ಸಾವಿಗೀಡಾಗಿದ್ದಾರೆ ಎಂಬುದರ ಬಗ್ಗೆ ಖಚಿತ ಮಾಹಿತಿ ಲಭ್ಯವಿಲ್ಲ. ಸದ್ಯ ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಮರಣೋತ್ತರ ಪರೀಕ್ಷೆ ನಡೆದಿದ್ದು, ವರದಿ ಕೈಸೇರಿದ ಬಳಿಕ ಸಾವಿಗೆ ಕಾರಣ ಏನೆಂಬುದು ತಿಳಿಯಲಿದೆ.

 

Leave a Reply

Your email address will not be published.