ಮೈಸೂರಿನಲ್ಲಿ ಎಚ್.ಡಿ ಕುಮಾರಸ್ವಾಮಿ ‘ಕರ್ನಾಟಕ ವಿಕಾಸ ವಾಹಿನಿ’ ಗೆ ಚಾಲನೆ

ಮಂಗಳವಾರ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ “ಕರ್ನಾಟಕ ವಿಕಾಸ ವಾಹಿನಿ” ಗೆ ಚಾಲನೆ ನೀಡಲಾಯಿತು. ಬೆಳಿಗ್ಗೆ:07.30ಕ್ಕೆ ಶ್ರೀ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲಾಯಿತು. ಬೆಳಿಗ್ಗೆ 8 ಕ್ಕೆ “ಕರ್ನಾಟಕ ವಿಕಾಸ ವಾಹಿನಿ” ಬಸ್ ಗೆ ಚಾಲನೆ (ಬಸ್ ಸಂಖ್ಯೆ:ಕೆ 59 ಎಂ 3366) ನೀಡಲಾಯಿತು. ಬೆಳಿಗ್ಗೆ 9 ಕ್ಕೆ ಹುತ್ತನಹಳ್ಳಿ ಶ್ರೀ ಜ್ವಾಲಾಮುಖಿ ತ್ರಿಪುರ ಸುಂದರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲಾಯಿತು.

ಬೆಳಿಗ್ಗೆ 10 ಗಂಟೆಗೆ ಹಿನಕಲ್ ಶ್ರೀ ನನ್ನೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲಾಯಿತು. ಚಾಮುಂಡೇಶ್ವರಿ ವಿಧಾನ ಸಭಾ ಕ್ಷೇತ್ರದ ಲಿಂಗದೇವರ ಕೊಪ್ಪಲಿನಲ್ಲಿ  ಬೆಳಿಗ್ಗೆ 11.30 ಕ್ಕೆ “ಕುಮಾರ ಪರ್ವ” ಕಾರ್ಯಕರ್ತರ ಬೃಹತ್ ಸಮಾವೇಶ ನಡೆಯಿತು. ಮದ್ಯಾಹ್ನ 2 ಕ್ಕೆ ಮಾಜಿ ಜಿಲ್ಲಾ ಪಂಚಾಯ್ತಿ ಸದಸ್ಯ ಶಿವಮೂರ್ತಿ ರವರ ಮನೆಯಲ್ಲಿ ಭೋಜನ ಮಾಡಿದ್ದಾರೆ.

ಮದ್ಯಾಹ್ನ 02.30 ಕ್ಕೆ ಮೈಸೂರಿನಿಂದ ಚಿಕ್ಕಮಗಳೂರಿಗೆ ಕರ್ನಾಟಕ ವಿಕಾಸ ವಾಹಿನಿ ಬಸ್ ನಲ್ಲಿ ಪ್ರಯಾಣ ಬೆಳೆಸಲಿದ್ದಾರೆ. ಸಂಜೆ 6.30 ಕ್ಕೆ ಚಿಕ್ಕಮಗಳೂರು ನಗರದ ಅಜಾದ್ ಪಾರ್ಕ್ ನಲ್ಲಿ ಕಾರ್ಯಕರ್ತರನ್ನು ಭೇಟಿಯಾಗಲಿದ್ದಾರೆ.  ಸಂಜೆ 7.30 ಕ್ಕೆ ಮೂಡಿಗೆರೆ ವಿಧಾನಸಭಾ ಕ್ಷೇತ್ರದ ಮುಗುಳವಳ್ಳಿಯಲ್ಲಿ ರೈತರ ಜೊತೆ ಸಂವಾದ ಕಾರ್ಯಕ್ರಮ ನಡೆಯಲಿದೆ. ರಾತ್ರಿ 8.30 ಕ್ಕೆ ಶ್ರೀ ಧರ್ಮಪಾಲ ಇವರ ಮನೆಗೆ ತೆರಳಿ ಅಲ್ಲಿ ಗ್ರಾಮ ವಾಸ್ತವ್ಯ ಹೂಡಲಿದ್ದಾರೆ.

Leave a Reply

Your email address will not be published.

Social Media Auto Publish Powered By : XYZScripts.com