ಪ್ರಜ್ವಲ್‌ ಪಾಲಿಟಿಕ್ಸ್‌ ಎಂಟ್ರಿಗೆ ನಾನಿನ್ನೂ ಗ್ರೀನ್‌ ಸಿಗ್ನಲ್‌ ನೀಡಿಲ್ಲ : ಎಚ್‌.ಡಿ ದೇವೇಗೌಡ

ಬೆಂಗಳೂರು : ವಿಧಾನ ಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ದೇವೇಗೌಡರ ಕುಟುಂಬದಲ್ಲಿ ಯಾರ್ಯಾರಿಗೆ ಟಿಕೆಟ್ ನೀಡುತ್ತಾರೆ, ಯಾರು ಎಲೆಕ್ಷನ್‌ಗೆ ನಿಲ್ಲುತ್ತಾರೆ ಎಂಬ ಕುರಿತು ತೀವ್ರ ಕುತೂಹಲ ಮೂಡಿದೆ. ಈ ಮಧ್ಯೆ ರೇವಣ್ಣ ಪುತ್ರ ನಿಖಿಲ್‌ ಅವರಿಗೂ ಈ ಬಾರಿ ಚುನಾವಣೆಯಲ್ಲಿ ಟಿಕೆಟ್ ನೀಡಲಾಗುತ್ತದೆ ಎಂಬ ವದಂತಿಯನ್ನು ಮಾಜಿ ಪ್ರಧಾನಿ ದೇವೇಗೌಡರು ಅಲ್ಲಗಳೆದಿದ್ದು, ನಿಖಿಲ್‌ಗೆ ಟಿಕೆಟ್‌ ನೀಡುವ ಕುರಿತು ನಾನಿನ್ನೂ ಗ್ರೀನ್‌ ಸಿಗ್ನಲ್‌ ನೀಡಿಲ್ಲ. ಪರಿಸ್ಥಿತಿ ನೋಡಿ ಆಮೇಲೆ ತೀರ್ಮಾನಿಸುತ್ತೇವೆ ಎಂದಿದ್ದಾರೆ.

ಕಳೆದ ಎರಡು ದಿನಗಳ ಹಿಂದಷ್ಟೇ ಪ್ರಜ್ವಲ್‌ ತಾಯಿ ಭವಾನಿ ರೇವಣ್ಣ ತಮ್ಮ ಪುತ್ರ ರಾಜಕೀಯ ಪ್ರವೇಶ ಮಾಡುವುದು ಖಚಿತ. ಆದರೆ ಯಾವ ಕ್ಷೇತ್ರದಿಂದ ಎಂಬ ಬಗ್ಗೆ ಚರ್ಚೆ ನಡೆಯುತ್ತಿದೆ. ಇದಕ್ಕೆ ದೇವೇಗೌಡರೂ ಗ್ರೀನ್‌ ಸಿಗ್ನಲ್‌ ನೀಡಿದ್ದಾಗಿ ಹೇಳಿದ್ದರು. ಆದರೆ ಈ ಕುರಿತು ಇಂದು ದೇವೇಗೌಡರು ಸ್ಪಷ್ಟನೆ ನೀಡಿದ್ದಾರೆ.

 

Leave a Reply

Your email address will not be published.

Social Media Auto Publish Powered By : XYZScripts.com