DKC ಯನ್ನು BJP ಗೆ ಸೆಳೆಯಲು IT ಬಳಿಕೆ : CM ಸಿದ್ದು ಆರೋಪಕ್ಕೆ ಕೆ.ಎಸ್ ಈಶ್ವರಪ್ಪ ಟಾಂಗ್..
ಹುಬ್ಬಳ್ಳಿ : ಐಟಿ ಅಧಿಕಾರಿಗಳ ಮೂಲಕ ಸಚಿವ ಡಿ.ಕೆ. ಶಿವಕುಮಾರ್ ಅವರನ್ನು ತಮ್ಮ ಪಕ್ಷಕ್ಕೆ ಸೆಳೆಯಲು ಬಿಜೆಪಿ ನಾಯಕರು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪರಿಷತ್ ವಿಪಕ್ಷ ನಾಯಕ ಕೆ.ಎಸ್ ಈಶ್ವರಪ್ಪ ಟಾಂಗ್ ನೀಡಿದ್ದಾರೆ.
ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಇಂದು ಮಾತನಾಡಿದ ಸಿಎಂ ಸಿದ್ದರಾಮಯ್ಯ, ಬಿಜೆಪಿಯವರು ಡಿ ಕೆ ಶಿವಕುಮಾರ್ ಅವರನ್ನ ಸೆಳೆಯುವ ಯತ್ನ ಫಲ ನೀಡುವುದಿಲ್ಲ. ಅದಕ್ಕೆಲ್ಲ ಡಿ.ಕೆ. ಶಿವಕುಮಾರ್ ಮಣಿಯಲ್ಲ, ಅವರು ಹುಟ್ಟು ಕಾಂಗ್ರೆಸ್ಸಿಗರಾಗಿದ್ದು ಇಂತಹ ಆಮಿಷಗಳಿಗೆ ಒಳಗಾಗುವುದಿಲ್ಲ ಎಂದು ತಿಳಿಸಿದರು.
ಸಿಎಂ ಹೇಳಿಕೆಗೆ ತಿರುಗೇಟು ನೀಡಿದ ಕೆ.ಎಸ್ ಈಶ್ವರಪ್ಪ, ಡಿ.ಕೆ ಶಿವಕುಮಾರ್ ನಿವಾಸದ ಮೇಲೆ ಐಟಿ ದಾಳಿ ನಡೆದು ಈಗಾಗಲೇ ಅಕ್ರಮ ಆಸ್ತಿ ಇರುವುದು ಪತ್ತೆಯಾಗಿದೆ. ಇದು ರಾಜ್ಯದ ಜನತೆಗೆ ಗೊತ್ತಿದೆ. ಹೀಗಾಗಿ ಡಿ.ಕೆ ಶಿವಕುಮಾರ್ ಬಿಜೆಪಿಗೆ ಬರ್ತೀನಿ ಅಂದ್ರೂ ಸೇರಿಸಿಕೊಳ್ಳುವುದಿಲ್ಲ ಎಂದು ಲೇವಡಿ ಮಾಡಿದರು.