ಟಿಪ್ಪು ಜಯಂತಿ : ಆಮಂತ್ರಣ ಪತ್ರಿಕೆಯಲ್ಲಿ ಶೋಭಾ ಕರಂದ್ಲಾಜೆ ಹೆಸರು ಕೈಬಿಟ್ಟ ಜಿಲ್ಲಾಡಳಿತ

ಉಡುಪಿ : ವಿವಾದಿತ ಟಿಪ್ಪು ಜಯಂತಿ ಆಚರಣೆ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾಡಳಿತ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಅವರ ಹೆಸರನ್ನು ಆಮಂತ್ರಣ ಪತ್ರಿಕೆಯಿಂದ ಕೈಬಿಟ್ಟಿದೆ. ನವೆಂಬರ್ 10 ರಂದು ಟಿಪ್ಪು ಜಯಂತಿ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾಡಳಿತ ವತಿಯಿದ ಪ್ರಕಟಿಸಲಾಗಿರುವ ಆಮಂತ್ರಣ ಪತ್ರಿಕೆಯಲ್ಲಿ ಶೋಭಾ ಕರಂದ್ಲಾಜೆ ಅವರ ಹೆಸರಿಲ್ಲ.

ಕೋಟ ಶ್ರೀನಿವಾಸ ಪೂಜಾರಿ ಹಾಗೂ ಸುನೀಲ್ ಕುಮಾರ್ ಅವರ ಹೆಸರುಗಳನ್ನೂ ಸಹ ಉಡುಪಿ ಜಿಲ್ಲಾಡಳಿತ ಮುದ್ರಿಸದೇ ಹಾಗೇ ಬಿಟ್ಟಿದೆ. ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಅವರ ಹೆಸರೂ ಆಮಂತ್ರಣ ಪತ್ರಿಕೆಯಲ್ಲಿ ಇಲ್ಲ. ಟಿಪ್ಪು ಜಯಂತಿ ಆಮಂತ್ರಣ ಪತ್ರಿಕೆಯಲ್ಲಿ ಹೆಸರು ಹಾಕಬೇಡಿ ಎಂದು ಬಿಜೆಪಿ ನಾಯಕರು ಹೇಳಿದ್ದರು. ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಹೆಸರು ಮುದ್ರಿಸಲಾಗಿದೆ. ನಾಳೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಟಿಪ್ಪು ಜಯಂತಿ ನಡೆಯಲಿದೆ.

Leave a Reply

Your email address will not be published.

Social Media Auto Publish Powered By : XYZScripts.com