CRICKET : ಶ್ರೀಲಂಕಾ ಟೆಸ್ಟ್ ಸರಣಿಗೆ ಭಾರತ ತಂಡ ಪ್ರಕಟ, ಹಾರ್ದಿಕ್ ಪಾಂಡ್ಯಗೆ ವಿಶ್ರಾಂತಿ

ನವೆಂಬರ್ 16 ರಿಂದ ಭಾರತ ಹಾಗೂ ಶ್ರೀಲಂಕಾ ತಂಡಗಳ ನಡುವೆ ಮೂರು ಪಂದ್ಯಗಳ ಟೆಸ್ಟ್ ಸರಣಿ ಆರಂಭವಾಗಲಿದೆ. ಶುಕ್ರವಾರ ಬಿಸಿಸಿಐ ಆಯ್ಕೆ ಸಮಿತಿ 15 ಸದಸ್ಯರ ಭಾರತ ತಂಡವನ್ನು ಪ್ರಕಟಿಸಿದೆ. ಟೀಮ್ ಇಂಡಿಯಾದ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಅವರಿಗೆ ವಿಶ್ರಾಂತಿ ನೀಡಲಾಗಿದೆ.

ನವೆಂಬರ್ 11 ರಿಂದ ಅಧ್ಯಕ್ಷರ ಎಲೆವನ್ ಹಾಗೂ ಶ್ರೀಲಂಕಾ ತಂಡಗಳ ನಡುವೆ ಎರಡು ದಿನಗಳ ಅಭ್ಯಾಸ ಪಂದ್ಯ ನಡೆಯಲಿದೆ. ಗಾಯಾಳು ನಮನ್ ಓಝಾ ಬದಲಿಗೆ ಪಂಜಾಬಿನ 21 ವರ್ಷದ ಬ್ಯಾಟ್ಸಮನ್ ಅನ್ಮೋಲ್ ಪ್ರೀತ್ ಸಿಂಗ್ ಅವರನ್ನು ಆಯ್ಕೆ ಮಾಡಲಾಗಿದೆ. ಅಧ್ಯಕ್ಷರ ಇಲೆವನ್ ತಂಡವನ್ನು ಕೇರಳದ ವಿಕೆಟ್ ಕೀಪರ್ ಬ್ಯಾಟ್ಸಮನ್ ಸಂಜು ಸ್ಯಾಮ್ಸನ್ ಮುನ್ನಡೆಸಲಿದ್ದಾರೆ.

ಶ್ರೀಲಂಕಾ ಟೆಸ್ಟ್ ಸರಣಿಗೆ ಭಾರತ ತಂಡ ಇಂತಿದೆ – ವಿರಾಟ್ ಕೊಹ್ಲಿ (ನಾಯಕ) , ಕೆಎಲ್ ರಾಹುಲ್, ಮುರಳಿ ವಿಜಯ್, ಶಿಖರ್ ಧವನ್, ಚೇತೇಶ್ವರ ಪೂಜಾರಾ, ಅಜಿಂಕ್ಯ ರಹಾನೆ, ರೋಹಿತ್ ಶರ್ಮಾ, ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್,  ರವೀಂದ್ರ ಜಡೇಜಾ, ಕುಲದೀಪ್ ಯಾದವ್, ಮೊಹಮ್ಮದ್ ಶಮಿ, ಉಮೇಶ್ ಯಾದವ್, ಭುವನೇಶ್ವರ್ ಕುಮಾರ್, ಇಶಾಂತ್ ಶರ್ಮಾ

Leave a Reply

Your email address will not be published.

Social Media Auto Publish Powered By : XYZScripts.com