ಟಿಪ್ಪು ಜಯಂತಿಗೆ ಎಲ್ಲೆಡೆ ಭಾರೀ ಆಕ್ರೋಶ : ಪ್ರತಿಭಟನಾಕಾರರನ್ನು ವಶಕ್ಕೆ ಪಡೆಯುತ್ತಿರುವ ಪೊಲೀಸರು

ಮಡಕೇರಿ/ಕೊಡಗು : ವಿರೋಧದ ನಡುವೆಯು ರಾಜ್ಯ ಸರ್ಕಾರ ಇಂದು ಟಿಪ್ಪು ಜಯಂತಿ ಆಚರಣೆ ಮಾಡುತ್ತಿದ್ದು, ಈ ಹಿನ್ನೆಲೆಯಲ್ಲಿ ಕೊಡಗು, ಮಡಕೇರಿ ಸೇರಿದಂತೆ ಹಲವೆಡೆ ಆಕ್ರೋಶ ವ್ಯಕ್ತವಾಗುತ್ತಿದೆ. ಒಂದೆಡೆ ಟಿಪ್ಪು ಜಯಂತಿ ನಡೆಯುತ್ತಿದ್ದರೆ ಮತ್ತೊಂದೆಡೆ ಟಿಪ್ಪು ಜಯಂತಿಗೆ ವಿರೋಧ ವ್ಯಕ್ತವಾಗಿದೆ.

ಮಡಕೇರಿಯಲ್ಲಿ ಟಿಪ್ಪು ಜಯಂತಿಯನ್ನು ವಿರೋಧಿಸಿ ಪ್ರತಿಭಟನೆ ನಡೆಸಲಾಗುತ್ತಿದ್ದು, ಪ್ರತಿಭಟನೆ ವೇಳೆ ಸರ್ಕಾರಿ ಬಸ್‌ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಪ್ರತಿಭಟನಾ ನಿರತರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಕೊಡಗಿನಲ್ಲಿ ಸೆಕ್ಷನ್‌ 144 ಜಾರಿ ಮಾಡಲಾಗಿದೆ.

ಅಲ್ಲದೆ ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಪೊಲೀಸರನ್ನು ನಿಯೋಜನೆ ಮಾಡಲಾಗಿದ್ದು, ನಿಷೇದಾಜ್ಞೆ ಮಧ್ಯೆಯೇ ಟಿಪ್ಪು ಜಯಂತಿ ಆಚರಣೆ ಮುಂದುವರಿದಿದೆ.

ಇನ್ನು ಮಡಕೇರಿಯಲ್ಲೂ ಶಾಸಕ ಅಪ್ಪಚ್ಚು ರಂಜನ್ ನೇತೃತ್ವದಲ್ಲಿ ನಡೆಯುತ್ತಿದ್ದ ಪ್ರತಿಭಟನೆಯನ್ನು ತಡೆದಿದ್ದು, ಅನೇಕ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.

 

 

 

 

Leave a Reply

Your email address will not be published.

Social Media Auto Publish Powered By : XYZScripts.com