ಮಿಷನ್ 150 ಇದ್ಮೇಲೆ ಅಪರೇಷನ್ ಕಮಲ ಯಾಕೆ…? ಬಿಜೆಪಿ ವಿರುದ್ದ ಹರಿಹಾಯ್ದ ಕುಮಾರಸ್ವಾಮಿ..

ಬೆಂಗಳೂರು : ಮುಂದಿನ ಚುನಾವಣೆಗೆ ನವಕರ್ನಾಟಕ ರ್ಯಾಲಿ ಮೂಲಕ ಸಿದ್ದತೆ ನಡೆಸುತ್ತಿರುವ ಬಿಜೆಪಿ ಅಪರೇಷನ್ ಕಮಲಕ್ಕೆ ಕೈ ಹಾಕಿದೆ ಎಂಬ ಮಾತು ಕೇಳಿ ಬರುತ್ತಿರುವ ಹಿನ್ನೆಲೆ, ಈ ಕುರಿತು ವ್ಯಂಗ್ಯವಾಡಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ ಕುಮಾರಸ್ವಾಮಿ, ಮಿಷನ್ 150 ಇದ್ದ ಮೇಲೆ ಅಪರೇಷನ್ ಕಮಲ ಯಾಕೆ? ಮಿಷನ್ 150 ಎಲ್ಲಿಗೆ ಹೋಯ್ತು…? ಎಂದು ವಾಗ್ದಾಳಿ ನಡೆಸಿದರು.

ಬೆಂಗಳೂರಿನಲ್ಲಿ ಇಂದು ಮಾತನಾಡಿದ ಹೆಚ್.ಡಿ ಕುಮಾರಸ್ವಾಮಿ,ಮಾಗಡಿ ಕಾಂಗ್ರೆಸ್ ಮುಖಂಡ ಇಂದು ಜೆಡಿಎಸ್ ಗೆ ಸೇರ್ಪಡೆಯಾಗಿದ್ದಾರೆ. ಮುಂದಿನ ದಿನಗಳಲ್ಲಿ ಮಾಗಡಿಯಲ್ಲಿ ಮಂಜು ಸಮಾವೇಶ ಮಾಡಲಿದ್ದಾರೆ. ಇನ್ನು ಮುಂದಿನ ತಿಂಗಳು ರವೀಂದ್ರ ಶ್ರೀಕಂಠಯ್ಯ ಜೆಡಿಎಸ್ ಸೇರ್ಪಡೆಯಾಗಲಿದ್ದಾರೆ ಎಂದು ತಿಳಿಸಿದರು.

ಟಿಪ್ಪು ಜಯಂತಿ ಆಚರಣೆ ಬಗ್ಗೆ ಎರಡು ರಾಷ್ಟ್ರೀಯ ಪಕ್ಷಗಳನ್ನ ತರಾಟೆಗೆ ತೆಗೆದುಕೊಂಡ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಟಿಪ್ಪು ಜಯಂತಿ ಆಚರಣೆಗೆ ಸರ್ಕಾರ ಎಲ್ಲರ ವಿಶ್ವಾಸ ಗಳಿಸಲಿಲ್ಲ. ರಾಜ್ಯದಲ್ಲಿ ಪೊಲೀಸ್ ಬಿಗಿ ಭದ್ರತೆ ಏರ್ಪಡಿಸುವ ಮೂಲಕ ನಿಷೇಧಾಜ್ಞೆ ಜಾರಿ ಮಾಡಿ ನಾಲ್ಕು ಗೋಡೆಗಳ ಮಧ್ಯೆ ಟಿಪ್ಪು ಜಯಂತಿ ಆಚರಿಸಿದ್ದಾರೆ. ಈ ಮೂಲಕ ಅಪಮಾನ ಮಾಡಿದ್ದಾರೆ. ಇನ್ನು ಇದಕ್ಕೆ ಬಿಜೆಪಿ ವಿರೋಧ ವ್ಯಕ್ತಪಡಿಸಿ ಟಿಪ್ಪುಗೆ ಅಗೌರವ ತೋರಿದ್ದಾರೆ ಎಂದು ಕಿಡಿ ಕಾರಿದರು.

Leave a Reply

Your email address will not be published.

Social Media Auto Publish Powered By : XYZScripts.com