ಖಜಾನೆ ಬರಿದು ಮಾಡಿರುವ ಸಿದ್ದರಾಮಯ್ಯ ರಾಜ್ಯವನ್ನು ಅಧೋಗತಿಗೆ ತಳ್ಳುತ್ತಿದ್ದಾರೆ : BSY

ಬಿಜೆಪಿಯ ಪರಿವರ್ತನಾ ಯಾತ್ರೆಯ 8ನೇ ದಿನವಾದ ಇಂದು ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್.ಯಡಿಯೂರಪ್ಪನವರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರಣಿ ಸಾರ್ವಜನಿಕ ಸಭೆಗಳನ್ನು ನಡೆಸುತ್ತಿದ್ದಾರೆ. ಮುಂಜಾನೆ ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದು ಬಂಟ್ವಾಳಕ್ಕೆ ಆಗಮಿಸಿದ ಮಾನ್ಯ ಯಡಿಯೂರಪ್ಪನವರನ್ನು ಬಂಟ್ವಾಳದ ಮಹಾಜನತೆ ಸಂಭ್ರಮಾದರಗಳಿಂದ ಸ್ವಾಗತಿಸಿತು.

ಅಲ್ಲಿ ಬೃಹತ್ ಸಂಖ್ಯೆಯಲ್ಲಿ ನೆರೆದಿದ್ದ ಸಾರ್ವಜನಿಕರನ್ನುದ್ದೇಶಿಸಿ ಯಡಿಯೂರಪ್ಪನವರು ಭಾಷಣ ಮಾಡಿದರು. ಒಂದೆಡೆ ತಮ್ಮ ಕಾರ್ಯದಕ್ಷತೆಯಿಂದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ದೇಶವನ್ನು ಅಭಿವೃದ್ಧಿಯ ಪಥದಲ್ಲಿ ಮುನ್ನಡೆಸುತ್ತಿದ್ದರೆ, ಖಜಾನೆಯನ್ನು ಬರಿದು ಮಾಡಿ ದಿವಾಳಿಯಾಗಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕರ್ನಾಟಕವನ್ನು ಅಧೋಗತಿಗೆ ತಳ್ಳುತ್ತಿದ್ದಾರೆ ಎಂದು ವಾಕ್ ಪ್ರಹಾರ ನಡೆಸಿದರು.

ಪರಿವರ್ತನಾ ಯಾತ್ರೆಗೆ ದೊರೆಯುತ್ತಿರುವ ಭಾರೀ ಜನಬೆಂಬಲದಿಂದ ಈ ಬಾರಿ ಚುನಾವಣೆಯಲ್ಲಿ ಕಮಲ ಅರಳುವುದು ಖಚಿತ ಎಂಬ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದರು. ಅವರ ಜೊತೆಯಲ್ಲಿ ಪಕ್ಷದ ಮುಖಂಡರುಗಳಾದ ಸದಾನಂದ ಗೌಡ, ಕೆ.ಎಸ್.ಈಶ್ವರಪ್ಪ, ಶ್ರೀರಾಮುಲು, ಶೋಭಾ ಕರಂದ್ಲಾಜೆ, ನಳಿನ್ ಕುಮಾರ್ ಕಟೀಲ್, ಕುಮಾರ್ ಬಂಗಾರಪ್ಪ ಮುಂತಾದವರು ಯಾತ್ರೆಯಲ್ಲಿ ಭಾಗವಹಿಸಿದ್ದರು

Leave a Reply

Your email address will not be published.

Social Media Auto Publish Powered By : XYZScripts.com