ಪರೀಕ್ಷೆ ದಿನಾಂಕ ಪ್ರಕಟವಾಗಿದೆ: ಯಾವುದೇ ಬದಲಾವಣೆ ಇಲ್ಲ- ಶಿಕ್ಷಣ ಸಚಿವ ತನ್ವೀರ್ ಸೇಠ್..

ಮೈಸೂರು: 2018ನೇ ವಿಧಾನ ಸಭಾ ಚುನಾವಣೆ ಹಿನ್ನೆಲೆಯಲ್ಲಿ ಪರೀಕ್ಷೆ ದಿನಾಂಕ ಪ್ರಕಟಿಸಲಾಗಿದೆ. ಇದರಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸಚಿವ ತನ್ವೀರ್ ಸೇಠ್ ಸ್ಪಷ್ಟಪಡಿಸಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿ ಪರೀಕ್ಷೆಯ ವೇಳಾಪಟ್ಟಿ ಪ್ರಕಟಗೊಂಡಿದೆ. ಪಿಯುಸಿ ಪರೀಕ್ಷೆ ಮಾರ್ಚ್ ೧ರಿಂದ ಹಾಗೂ ಎಸ್.ಎಸ್.ಎಲ್.ಸಿ.ಪರೀಕ್ಷೆ 23ರಿಂದ ನಡೆಯಲಿದೆ. ನಿಗದಿಯಾದ ದಿನಾಂಕದಲ್ಲಿಯೇ ಪರೀಕ್ಷೆ ನಡೆಯಲಿದೆ. ದಿನಾಂಕದ ಬಗ್ಗೆ ಪೋಷಕರು ಆತಂಕಪಡುವ ಅಗತ್ಯ ಇಲ್ಲ ಎಂದು ತಿಳಿಸಿದರು.

ಸರ್ವ ಶಿಕ್ಷಣ ಅಭಿಯಾನಕ್ಕೆ ಕೇಂದ್ರ ಸರ್ಕಾರ ನೀಡಿದ ನಿಧಿ ಸಂಪೂರ್ಣ ಬಳಕೆ ಮಾಡುವಲ್ಲಿ ನಮ್ಮ ಸರ್ಕಾರ ಯಶಸ್ವಿಯಾಗಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Leave a Reply

Your email address will not be published.