ನನ್ನ ಮೇಲಿನ ಭ್ರಷ್ಟಾಚಾರ ಆರೋಪ ಸಾಬೀತಾದ್ರೆ ರಾಜಕೀಯ ನಿವೃತ್ತಿ – CM ಸಿದ್ದರಾಮಯ್ಯ..

ಬೆಂಗಳೂರು: ಜೈಲಿಗೆ ಹೋಗಿ ಬಂದವರಿಂದ ನನ್ನ ವಿರುದ್ದ ಭ್ರಷ್ಟಾಚಾರ ಆರೋಪ ಮಾಡಲಾಗುತ್ತಿದೆ. ಆರೋಪ ಸಾಭೀತಾದರೇ ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸವಾಲು ಹಾಕಿದರು.


ಬೆಂಗಳೂರಿನಲ್ಲಿ ಇಂದು ಮಾತನಾಡಿದ ಸಿಎಂ ಸಿದ್ದರಾಮಯ್ಯ, ಭ್ರಷ್ಟಾಚಾರ ಆರೋಪದ ಬಗ್ಗೆ ಒಂದೇ ವೇದಿಕೆಯಲ್ಲಿ ಬಹಿರಂಗ ಚರ್ಚೆಗೆ ಬನ್ನಿ. ಇಲ್ಲವಾದರೇ ಸೋಮವಾರ ಅಧಿವೇಶನವಿದೆ ಅಲ್ಲೇ ಚರ್ಚಿಸೋಣ ಬನ್ನಿ ಎಂದು ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದರು.

ಬಿಜೆಪಿಯವರು ನಯವಂಚಕರು. ಬೆಣ್ಣೇಲಿ ಕೂದಲು ತೆಗೆದಂತೆ ಮಾತನಾಡ್ತಾರೆ. ಬಿಜೆಪಿಯಂತಹ ಕೊಳಕು ಭ್ರಷ್ಠಾಚಾರ ರಾಜಕಾರಣಿಗಳು ಬೇರ್ಯಾರೂ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು. ಜೈಲಿಗೆ ಹೋಗಿ ಬಂದವರು ಮತ್ತೊಬ್ಬರ ಬಗ್ಗೆ ಹಗುರವಾಗಿ ಮಾತನಾಡಬಾರದು ಎಂದು ಅವರು ಹೇಳಿದರು…

Leave a Reply

Your email address will not be published.