ನಮ್ಮ ಸರ್ಕಾರ ಭ್ರಷ್ಟಾಚಾರ ದಿಂದ ಮುಕ್ತ : ಇನ್ನು ದಾಖಲೆ ಬಿಡುಗಡೆ ಮಾತೆಲ್ಲಿ-BSYಗೆ CM ತಿರುಗೇಟು..

ಕೊಪ್ಪಳ : ರಾಜ್ಯ ಸರ್ಕಾರದ ಭ್ರಷ್ಟಾಚಾರ ದಾಖಲೆಯನ್ನ ನಾಳಿನ ಅಧಿವೇಶನದಲ್ಲಿ ಬಿಡುಗಡೆ ಮಾಡುತ್ತೇವೆ ಎಂದು ಹೇಳಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ನಮ್ಮ ಸರ್ಕಾರದಲ್ಲಿ ಯಾವುದೇ ಭ್ರಷ್ಠಾಚಾರ ಮಾಡಿಲ್ಲ. ಇನ್ನು ದಾಖಲೆ ಬಿಡುಗಡೆ ಮಾತೆಲ್ಲಿ ಎಂದು ಸಿಎಂ ಸಿದ್ದರಾಮಯ್ಯ ಟಾಂಗ್ ನೀಡಿದ್ದಾರೆ.

ನನ್ನ ಮತ್ತು ನಮ್ಮ ಸರ್ಕಾರದ ವಿರುದ್ದ ಯಾವುದೇ ಎಫ್ ಐಆರ್ ದಾಖಲಾಗಿಲ್ಲ. ಮೊದಲು ನಿಮ್ಮ ಮೇಲಿರುವ ಎಫ್ ಐ ಆರ್ ನಿಂದ ಹೊರಬನ್ನಿ. ನಿಮ್ಮ ವಿರುದ್ದ ಡಿನೋಟಿಫೈ ಸೇರಿದ್ದಂತೆ ಹಲವು ಹಗರಣಗಳಲ್ಲಿ ಎಫ್ ಐಆರ್ ದಾಖಲಾಗಿವೆ ಎಂದು ವಾಗ್ದಾಳಿ ನಡೆಸಿದರು.

ಹಾಗೆಯೇ ಸಿದ್ದರಾಮಯ್ಯ ಮೈಯಲ್ಲಿ ಟಿಪ್ಪು ರಕ್ತ ಹರಿಯುತ್ತಿದೆ ಎಂದು ಹೇಳಿಕೆ ನೀಡಿದ್ದ ಕೆ.ಎಸ್ ಈಶ್ವರಪ್ಪಗೆ ತಿರುಗೇಟು ನೀಡಿದ ಸಿಎಂ ಸಿದ್ದರಾಮಯ್ಯ, ನಮ್ಮ ಮೈಯಲ್ಲಿ ಮನುಷ್ಯರ ರಕ್ತ ಹರಿಯುತ್ತಿದೆ. ಆದರೆ ಕೆ.ಎಸ್ ಈಶ್ವರಪ್ಪ ಮೈಯಲ್ಲಿ ಪಿಶಾಚಿ ರಕ್ತ ಹರಿಯುತ್ತಿದೆ ಎಂದು ಕಿಡಿ ಕಾರಿದರು. ಮುಂದಿನ ಚುನಾವಣೆಯಲ್ಲಿ ರಾಜ್ಯದ ಜನತೆ ಉತ್ರ ನೀಡುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು…

Leave a Reply

Your email address will not be published.

Social Media Auto Publish Powered By : XYZScripts.com