Doctors Strike : ಪ್ರತಿಭಟನೆ ಕೈ ಬಿಡುವಂತೆ ಮನವಿ, ಚರ್ಚೆಗೆ ಸಿದ್ದ – CM ಸಿದ್ದರಾಮಯ್ಯ..

ಬೆಳಗಾವಿ : ಕೆಪಿಎಂಇ ತಿದ್ದುಪಡಿ ಮಸೂದೆ ಮಂಡನೆಗೂ ಮುನ್ನ ಖಾಸಗಿ ಆಸ್ಪತ್ರೆ ವೈದ್ಯರ ಜತೆ ಮತ್ತೆ ಚರ್ಚೆ ಮಾಡುವ ಭರವಸೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.


KPME ತಿದ್ದುಪಡಿ ಕಾಯ್ದೆ ಜಾರಿ ವಿರೋಧಿಸಿ ಇಂದು ಖಾಸಗಿ ಆಸ್ಪತ್ರೆಯ ವೈದ್ಯರು ಬೆಳಗಾವಿಯಲ್ಲಿ ಪ್ರತಿಭಟನೆಗಿಳಿದಿದ್ದಾರೆ. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಇಂದಿನಿಂದ ಚಳಿಗಾಲದ ಅಧಿವೇಶನ ಪ್ರಾರಂಭವಾಗಿದ್ದು, ಸುವರ್ಣಸೌಧದ ಮುಂದೆ ಭಾರತೀಯ ವೈದ್ಯಕೀಯ ಸಂಘದ (ಐಎಂಎ) ನೇತೃತ್ವದಲ್ಲಿ ರಾಜ್ಯದ ಖಾಸಗಿ ವೈದ್ಯರು ಬೃಹತ್ ಪ್ರತಿಭಟನೆ ನಡೆಸುತ್ತಿದ್ದಾರೆ.

ಕೆಪಿಎಂಇ ತಿದ್ದುಪಡಿ ಮಸೂದೆ ಜಾರಿ ವಿರೋಧಿಸಿ ರಾಜ್ಯದ ಖಾಸಗಿ ಆಸ್ಪತ್ರೆಯ ವೈದ್ಯರು ಬೆಳಗಾವಿಯ ಸುವರ್ಣಸೌಧದ ಮುಂದೆ ಪ್ರತಿಭಟನೆ ನಡೆಸುತ್ತಿರುವ ಹಿನ್ನೆಲೆ, ಖಾಸಗಿ ಆಸ್ಪತ್ರೆ ವೈದ್ಯರ ಜತೆ ಸಿಎಂ ಸಿದ್ದರಾಮಯ್ಯ ಸಂಧಾನ ಸಭೆ ನಡೆಸಿ ಚರ್ಚಿಸಿದರು. ಸಭೆ ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಮಸೂದೆ ಮಂಡನೆಗೂ ಮುನ್ನ ಚರ್ಚೆ ಮಾಡುವ ಭರವಸೆ ನೀಡಿದ್ದೇನೆ. ಹಾಗೆಯೇ ಪ್ರತಿಭಟನೆ ಕೈಬಿಡಬೇಕೆಂದು ವೈದ್ಯರಲ್ಲಿ ಸಭೆಯಲ್ಲಿ ಮನವಿ ಮಾಡಿದ್ದೇನೆ. ಖಾಸಗಿ ಆಸ್ಪತ್ರೆ ವೈದ್ಯರು ಪ್ರತಿಭಟನೆ ಕೈಬಿಡುವ ವಿಶ್ವಾಸವಿದೆ ಎಂದು ತಿಳಿಸಿದರು.

Leave a Reply

Your email address will not be published.

Social Media Auto Publish Powered By : XYZScripts.com