ಲಂಕಾ ಸರಣಿಯಲ್ಲಿ ಸೌರವ್ ದಾಖಲೆ ಮುರಿಯಲಿದ್ದಾರಾ ಕ್ಯಾಪ್ಟನ್ ಕೊಹ್ಲಿ..?

ಮಾಜಿ ನಾಯಕ ಸೌರವ್ ಗಂಗೂಲಿ ಭಾರತ ಕ್ರಿಕೆಟ್ ತಂಡದ ಶ್ರೇಷ್ಟ ನಾಯಕರಲ್ಲಿ ಒಬ್ಬರು. ಪ್ರಸಕ್ತ ಟೀಮ್ ಇಂಡಿಯಾದ ನಾಯಕರಾಗಿರುವ ವಿರಾಟ್ ಕೊಹ್ಲಿ, ಅಂತರಾಷ್ಟ್ರೀಯ ಟೆಸ್ಟ್ ಪಂದ್ಯಗಳಲ್ಲಿ ಸೌರವ್ ಗಂಗೂಲಿ ಅವರ ದಾಖಲೆಯನ್ನು ಮುರಿಯುವ ಹಂತದಲ್ಲಿದ್ದಾರೆ.

ಸೌರವ್ ಗಂಗೂಲಿ ಮುನ್ನಡೆಸಿರುವ 49 ಟೆಸ್ಟ್ ಪಂದ್ಯಗಳಲ್ಲಿ ಭಾರತ 21 ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ಎಮ್ ಎಸ್ ಧೋನಿ ನಾಯಕತ್ವ ವಹಿಸಿದ್ದ 60 ಟೆಸ್ಟ್ ಮ್ಯಾಚ್ ಗಳಲ್ಲಿ ಟೀಮ್ ಇಂಡಿಯಾ 27 ರಲ್ಲಿ ಜಯ ಗಳಿಸಿದೆ. ಮಹಮ್ಮದ್ ಅಜರುದ್ದೀನ್ ನಾಯಕತ್ವದಲ್ಲಿ ಆಡಿದ 47 ಟೆಸ್ಟ್ ಪಂದ್ಯಗಳಲ್ಲಿ ಭಾರತ 14 ರಲ್ಲಿ ಗೆಲುವು ಪಡೆದಿತ್ತು. ವಿರಾಟ್ ಕೊಹ್ಲಿ ನಾಯಕತ್ವದಲ್ಲಿ 29 ಟೆಸ್ಟ್ ಪಂದ್ಯಗಳಲ್ಲಿ 19 ರಲ್ಲಿ ಜಯ ಸಾಧಿಸಿದೆ.

Image result for sourav ganguly on virat kohli

ನವೆಂಬರ್ 16 ರಿಂದ ಶ್ರೀಲಂಕಾ ವಿರುದ್ಧ ಭಾರತ 3 ಟೆಸ್ಟ್ ಪಂದ್ಯಗಳನ್ನು ಆಡಲಿದೆ. ಶ್ರೀಲಂಕಾ ವಿರುದ್ಧದ ಸರಣಿಯನ್ನು ಭಾರತ 3-0 ಯಿಂದ ಗೆದ್ದು ವೈಟ್ ವಾಷ್ ಮಾಡಿದರೆ, ವಿರಾಟ್ ಕೊಹ್ಲಿ, ಸೌರವ್ ದಾಖಲೆಯನ್ನು ಮುರಿಯಲಿದ್ದಾರೆ. ನಾಯಕರಾಗಿ ಅತಿ ಹೆಚ್ಚು ಪಂದ್ಯಗಳನ್ನು ಜಯಿಸಿದವರ ಪಟ್ಟಿಯಲ್ಲಿ ಧೋನಿ ಮೊದಲ ಸ್ಥಾನದಲ್ಲಿದ್ದರೆ, ಸೌರವ್ ಗಂಗೂಲಿ ಎರಡನೇ ಸ್ಥಾನದಲ್ಲಿದ್ದಾರೆ. ವಿರಾಟ್ ಕೊಹ್ಲಿ ಮೂರನೇ ಸ್ಥಾನದಲ್ಲಿದ್ದಾರೆ.

Leave a Reply

Your email address will not be published.