ಪ್ರತಿಭಟನೆ ಕೈಬಿಟ್ಟು ಕೆಲಸಕ್ಕೆ ಹಾಜರಾಗಿ : ವೈದ್ಯರಿಗೆ ಹೈಕೋರ್ಟ್‌ ಸೂಚನೆ

ಬೆಂಗಳೂರು : ಜನರ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಮುಷ್ಕರವನ್ನು ಕೈಬಿಟ್ಟು ಮತ್ತೆ ಕೆಲಸಕ್ಕೆ ಹಾಜರಾಗುವಂತೆ ಪ್ರತಿಭಟನಾನಿರತ ವೈದ್ಯರಿಗೆ ಹೈಕೋರ್ಟ್‌ ಸೂಚಿಸಿದೆ.

ಪರಿಸ್ಥಿತಿಯನ್ನು ಅರ್ಥ ಮಾಡಿಕೊಳ್ಳಿ. ನಿಮ್ಮ ಜೊತೆ ಮಾತನಾಡಲು ಸರ್ಕಾರ ಸಿದ್ದವಿದೆ. ಅವರ ಜೊತೆ ಮಾತುಕತೆ ನಡೆಸಿದ ಬಳಿಕ ಮುಂದಿನ ನಿರ್ಧಾರ ಕೈಗೊಳ್ಳುವಂತೆ ಸೂಚಿಸಿದೆ. ನೀವು ಅಕ್ಷರಸ್ಥರು, ತಿಳಿದವರು. ಮಸೂದೆ ಮಂಡನೆಗೂ ಮುನ್ನ ಈ ರೀತಿ ಪ್ರತಿಭಟನೆ ಮಾಡುವುದು ಸರಿಯೇ ? ಎಂದು ಹೈಕೋರ್ಟ್‌ನ ವಿಭಾಗೀಯ ಪೀಠದ ನ್ಯಾಯಮೂರ್ತಿ ಎಚ್‌.ಜಿ ರಮೇಶ್‌ ಪ್ರಶ್ನಿಸಿದ್ದಾರೆ.

ವೈದ್ಯರ ಮುಷ್ಕರವನ್ನು ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಎರಡು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿತ್ತು. ಈ ಅರ್ಜಿ ವಿಚಾರಣೆ ನಡೆಸಿದ ಪೀಠ, ಕೂಡಲೆ ಮುಷ್ಕರವನ್ನು ಹಿಂಪಡೆಯುವಂತೆ ಸೂಚನೆ ನೀಡಿದೆ.

Leave a Reply

Your email address will not be published.

Social Media Auto Publish Powered By : XYZScripts.com