ಪದ್ಮಾವತಿ ಸಿನಿಮಾ ಬಿಡುಗಡೆಯಾದರೆ ಕಾನೂನು ಸುವ್ಯವಸ್ಥೆ ಹದಗೆಡಬಹುದು : ಯೋಗಿ

ಲಖನೌ : ಬನ್ಸಾಲಿ ಅವರ ಪದ್ಮಾವತಿ ಸಿನಿಮಾ ಬಿಡುಗಡೆಯಾದರೆ ಕಾನೂನು ಸುವ್ಯವಸ್ಥೆಗೆ ತೊಂದರೆ ಉಂಟಾಗಬಹುದು ಎಂದು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.

ಈ ಕುರಿತು ಕೇಂದ್ರ ಸರ್ಕಾರಕ್ಕೆ ಮಾಹಿತಿ ನೀಡಿರುವ ಅವರು, ಪದ್ಮಾವತಿ ಸಿನಿಮಾದಲ್ಲಿ ಇತಿಹಾಸವನ್ನು ತಿರುಚಲಾಗಿದೆ ಎಬ ವಿಚಾರವಾಗಿ ಜನ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಇದನ್ನು ಕೇಂದ್ರ ಸರ್ಕಾರ ಸೆನ್ಸಾರ್‌ ಮಂಡಳಿಗೆ ತಿಳಿಸಬೇಕು. ಡಿಸೆಂಬರ್‌ 1ರಂದು ಸಿನಿಮಾ ಬಿಡುಗಡೆಯಾದರೆ ಉತ್ತರ ಪ್ರದೇಶದಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗಬಹುದು ಎಂದು ಕೇಂದ್ರಕ್ಕೆ ಪತ್ರ ಬರೆದಿದ್ದಾರೆ.

ಜನ ಪದ್ಮಾವತಿ ಸಿನಿಮಾದ ಬಗ್ಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಇದನ್ನು ಗಮನದಲ್ಲಿಟ್ಟುಕೊಂಡು ನಿರ್ಧಾರ ಕೈಗೊಳ್ಳಬೇಕು. ವಸ್ತು ಸ್ಥಿತಿ ಏನೆಂಬುದು ಸೆನ್ಸಾರ್ ಮಂಡಳಿಗೆ ಅರಿವಾಗಬೇಕು. ಸಿನಿಮಾದ ಟೀಸರ್‌ ಬಿಡುಗಡೆಯಾದಾಗಿನಿಂದ ಸಿನಿಮಾಗೆ ವಿರೋಧ ವ್ಯಕ್ತವಾಗುತ್ತಿದೆ. ಈ ರೀತಿ ಹಿಂದೆಯೂ ಸಹ ನಡೆದಿದ್ದು, ಕಾನೂನು ಸುವ್ಯವಸ್ಥೆ ಹದಗೆಟ್ಟಿತ್ತು. ಉತ್ತರ ಪ್ರದೇಶದಲ್ಲಿ ನವೆಂಬರ್‌22, 26, 29ರಂದು ಪೌರ ಸಂಸ್ಥೆಗಳಿಗೆ ಚುನಾವಣೆ ನಡೆಯಲಿದೆ. ಅಲ್ಲದೆ ಡಿ. 2ರಂದ ಬಾರಾವಘಾತ್‌ ಮೆರಣಿಗೆ ನಡೆಯಲಿದೆ. ಈ ಮದ್ಯೆ ಪದ್ಮಾವತಿ ರಿಲೀಸ್‌ ಆದರೆ ಸಾಕಷ್ಟು ತೊಂದರೆ ಅನುಭವಿಸಬೇಕಾಗುತ್ತದೆ ಎಂದು ಪತ್ರದಲ್ಲಿ ಎಚ್ಚರಿಸಲಾಗಿದೆ.

 

Leave a Reply

Your email address will not be published.

Social Media Auto Publish Powered By : XYZScripts.com