ಮರಳಿ ಮಂಡ್ಯಕ್ಕೆ ಬರಲಿದ್ದಾರಂತೆ ರಮ್ಯಾ….?! ಪದ್ಮಾವತಿ ಕಣ್ಣು ಬಿದ್ದಿರುವುದು ಇದರ ಮೇಲಂತೆ….?

ಮಂಡ್ಯ : ಮಾಜಿ ಸಂಸದೆ ರಮ್ಯಾ ಮಂಡ್ಯದ ಲೋಕಸಭೆ ಉಪಚುನಾವಣೆ ಮೇಲೆ ಕಣ್ಣು ಹಾಕಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ಮಂಡ್ಯಕ್ಕೆ ವಾಪಸ್ಸಾಗುವುದು ಖಚಿತ ಎಂದು ಮೂಲಗಳು ತಿಳಿಸಿವೆ.

ಕೆಲ ದಿನಗಳ ಹಿಂದಷ್ಟೇ ರಮ್ಯಾ ಮೇಲುಕೋಟೆಯಿಂದ ವಿಧಾನ ಸಭಾ ಚುನಾವಣೆಗೆ ಸ್ಪರ್ಧಿಸುತ್ತಾರೆ ಎಂಬ ಸುದ್ದಿ ಹರಿದಾಡುತ್ತಿತ್ತು. ಆದರೆ ಅವರು ವಿಧಾನಸಭಾ ಚುನಾವಣೆ ಮೇಲಲ್ಲ. ಮಂಡ್ಯದ ಲೋಕಸಭಾ ಉಪ ಚುನಾವಣೆ ಮೇಲೆ ಕಣ್ಣಿಟ್ಟಿರುವುದಾಗಿ ತಿಳಿದುಬಂದಿದೆ. ಈ ವಿಚಾರ ರಾಜಕೀಯ ವಲಯದಲ್ಲಿ ಭಾರೀ ಚರ್ಚೆ ಹುಟ್ಟುಹಾಕಿದೆ.

ಮಂಡ್ಯ ಸಂಸದ ಪುಟ್ಟರಾಜು ಜೆಡಿಎಸ್‌ ಪಕ್ಷದಿಂದ ಮೇಲುಕೋಟೆಯಲ್ಲಿ ಚುನಾವಣೆ ಎದುರಿಸಲು ಸಿದ್ದವಾಗಿದ್ದಾರೆ. ಆದ್ದರಿಂದ ಅವರು ತಮ್ಮ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ. ಈ ಹಿನ್ನೆಲೆಯಲ್ಲಿ ತೆರವಾದ ಸ್ಥಾನಕ್ಕೆ ಉಪಚುನಾವಣೆ ನಡೆಯಲಿದ್ದು, ಇದೇ ವೇಳೆ ವಿಧಾನಸಭಾ ಚುನಾವಣೆಯೂ ನಡೆಯುತ್ತದೆ ಎನ್ನಲಾಗಿದೆ.

ಈ ಕಾರಣದಿಂದಾಗಿ ರಮ್ಯಾ ಮತ್ತೆ ಮಂಡ್ಯದಲ್ಲಿ ಕಣಕ್ಕಿಳಿಯುವದು ಬಹುತೇಕ ಖಚಿತವಾದಂತಾಗಿದೆ. ಆದರೆ ಪುಟ್ಟರಾಜು ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದರೆ ಮಾತ್ರ ರಮ್ಯಾಗೆ ಸಂಸದ ಸ್ಥಾನಕ್ಕೆ ಕಣಕ್ಕಿಳಿಯಲು ಅವಕಾಶ ಸಿಗಲಿದೆ.

 

Leave a Reply

Your email address will not be published.