ರಾಷ್ಟ್ರಧ್ವಜಕ್ಕಿಂತ ಎತ್ತರದಲ್ಲಿ ಪಕ್ಷದ ಧ್ವಜ ಹಾರಿಸಿದ BJP ಕಾರ್ಯಕರ್ತರು

ಲಖನೌ : ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ಸರ್ಕಾರ ತನ್ನ ಕಚೇರಿಗಳಿಗೆ ಕೇಸರಿ ಬಣ್ಣ ಬಳಿದು ಭಾರೀ ಸುದ್ದಿಗೆ ಗ್ರಾಸವಾಗಿತ್ತು. ಆದರೆ ಈಗ ಗಾಜಿಯಾಬಾದ್‌ನ ರಾಂಲೀಲಾ ಮೈದಾನದಲ್ಲಿ ಬಿಜೆಪಿ ರ್ಯಾಲಿ ನಡೆದಿದ್ದು, ಈ ವೇಳೆ ರಾಷ್ಟ್ರಧ್ವಜಕ್ಕಿಂತ ಬಿಜೆಪಿಯ ಧ್ವಜವನ್ನು ಎತ್ತರಕ್ಕೆ ಹಾರಿಸಲಾಗಿದೆ. ಈ ಸಂಗತಿ ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ.

ಬಿಜೆಪಿ ರ್ಯಾಲಿಗೆ ಯೋಗಿ ಆದಿತ್ಯನಾಥ್‌ ಆಗಮಿಸುವುದಕ್ಕೂ ಮುನ್ನ ಬಿಜೆಪಿಯ ಕಾರ್ಯಕರ್ತರು ರಾಷ್ಟ್ರಧ್ವಜಕ್ಕಿಂತ ಎತ್ತರದಲ್ಲಿ ಬಿಜೆಪಿ ಧ್ವಜ ಹಾರಿಸಿದ್ದರು ಎಂದು ಪ್ರತ್ಯಕ್ಷ ದರ್ಶಿಗಳು ರಾಷ್ಟ್ರೀಯ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.

ಈ ಫೋಟೊ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್‌ ಆಗಿದೆ. ಸೋಶಿಯಲ್‌ ಮೀಡಿಯಾಗಳಲ್ಲಿ ಈ ಫೋಟೋ ವೈರಲ್‌ ಆಗುತ್ತಿದ್ದಂತೆ ಜಿಲ್ಲಾಡಳಿತ ಬಿಜೆಪಿ ಬಾವುಟವನ್ನು ಕೆಳಗಿಳಿಸಿದೆ. ಅಲ್ಲದೆ ಯೋಗಿ ಆದಿತ್ಯನಾಥ್‌ ರ್ಯಾಲಿಗೆ ಆಗಮಿಸುವುದಕ್ಕೂ ಮುನ್ನ ಬಾವುಟವನ್ನು ತೆರವುಗೊಳಿಸಲಾಯಿತು ಎಂದು ಮೂಲಗಳು ತಿಳಿಸಿವೆ.

ಇದುವರೆಗೂ ಯಾವುದೇ ಪ್ರಕರಣ ದಾಖಲಾಗಿಲ್ಲ.

ಫ್ಲಾಗ್‌ ಕೋಡ್‌ ಆಫ್‌ ಇಂಡಿಯಾ 2002ರ ಪ್ರಕಾರ ರಾಷ್ಟ್ರಧ್ವಜಕ್ಕಿಂತ ಎತ್ತರದಲ್ಲಿ ಯಾವುದೇ ಫ್ಲೆಕ್ಸ್‌, ಬಂಟಿಂಗ್ಸ್‌, ಹಾರ, ಹೂ…ಗಳನ್ನು ಇಡುವಂತಿಲ್ಲ, ಅಥವಾ ಹಾರಿಸುವಂತಿಲ್ಲ. ಆದರೆ ಉತ್ತರ ಪ್ರದೇಶದಲ್ಲಿ ಕಾನೂನನ್ನು ಉಲ್ಲಂಘಿಸಲಾಗಿದೆ ಎಂದು ಆರೋಪಿಸಲಾಗಿದೆ.

 

Leave a Reply

Your email address will not be published.