ಸೋನಿಯಾ ಗಾಂಧಿ ಅವರ ಕೃಪೆಯಿಂದ ನಾನು ಸಿಎಂ ಆದೆ : ಸಿದ್ದರಾಮಯ್ಯ

ಮಂಡ್ಯ : ನಾನು ಜೆಡಿಎಸ್‌ನಲ್ಲೇ ಇದ್ದಿದ್ದರೆ ಸಿಎಂ ಆಗಲು ಬಿಡುತ್ತಿರಲಿಲ್ಲ. ಕಾಂಗ್ರೆಸ್‌ಗೆ ಸೇರಿದ ಮೇಲೆ ಸೋನಿಯಾ ಗಾಂಧಿ ಅವರ ಕೃಪೆಯಿಂದ ಸಿಎಂ ಆಗಿದ್ದೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಮಂಡ್ಯದ್ಲಲಿ ನಡೆದ ಸಭೆಯೊಂದರಲ್ಲಿ ಮಾತನಾಡಿದ ಸಿಎಂ, ನಾನು 1996ರಲ್ಲೇ ಮುಖ್ಯಮಂತ್ರಿಯಾಗಬೇಕಿತ್ತು. ಆದರೆ ಅದನ್ನು ತಪ್ಪಿಸಿರು. 2004ರಲ್ಲಿ ಸಿಎಂ ಆಗಬೇಕೆಂದೆ, ಜೆಡಿಎಸ್‌ನಿಂದ ಹೊರ ಹಾಕಿದರು. ಇದೇ ಕಾರಣಕ್ಕೆ ಕಾಂಗ್ರೆಸ್‌ ಸೇರಿದೆ. ಸೋನಿಯಾ ಗಾಂಧಿಯವರ ಕೃಪಾಕಟಾಕ್ಷದಿಂದ ಇಂದು ಸಿಎಂ ಆಗಿದ್ದೇನೆ ಎಂದಿದ್ದಾರೆ.

ಅನೇಕ ಜೆಡಿಎಸ್‌ ಬಂಡಾಯ ಶಾಸಕರು ಸದ್ಯದಲ್ಲೇ ಕಾಂಗ್ರೆಸ್‌ ಸೇರಲಿದ್ದಾರೆ. ಅವರ ಪರವಾಗಿ ಮತ ಕೇಳಲು ನಾನು ನಿಮ್ಮಲ್ಲಿಗೆ ಬರುತ್ತೇನೆ ಎಂದಿದ್ದಾರೆ.

ನಮ್ಮ ಸರ್ಕಾರ ಎಲ್ಲರಿಗೂ ಉಪಯೋಗವಾಗುವಂತಹ ಯೋಜನೆಗಳನ್ನು ನೀಡಿದೆ. ಬಿಜೆಪಿ ನಾಯಕರು ತಿಪ್ಪರಲಾಗ ಹಾಕಿದ್ರೂ, ಯಾವ ರ್ಯಾಲಿ ಮಾಡಿದರೂ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ. ಜೈಲಿಗೆ ಹೋಗಿ ಬಂದ ಗಿರಾಕಿಗಳೆಲ್ಲ ನನ್ನನ್ನು ಕಮಿಷನ್ ಏಜೆಂಟ್‌ ಎನ್ನುತ್ತಾರೆ. ಆದರೆ ದಾಖಲೆ ಸಮೇತ ಭ್ರಷ್ಟಾಚಾರ ನಡೆದಿರುವುದನ್ನು ತೋರಿಸಿದರೆ ರಾಜಕೀಯ ತೊರೆಯುತ್ತೇನೆ ಎಂದಿದ್ದಾರೆ.

Leave a Reply

Your email address will not be published.

Social Media Auto Publish Powered By : XYZScripts.com