CRICKET : ಕೊಹ್ಲಿ ಮಿಂಚಿನ ಶತಕ : ಕೋಲ್ಕತಾ ಟೆಸ್ಟ್ ಡ್ರಾನಲ್ಲಿ ಅಂತ್ಯ

ಕೋಲ್ಕತಾದ ಈಡನ್ ಗಾರ್ಡನ್ ನಲ್ಲಿ ಭಾರತ ಹಾಗೂ ಶ್ರೀಲಂಕಾ ನಡುವೆ ನಡೆದ ಮೊದಲ ಟೆಸ್ಟ್ ಪಂದ್ಯ ಡ್ರಾನಲ್ಲಿ ಅಂತ್ಯಗೊಂಡಿದೆ. 5ನೇ ದಿನವಾದ ಸೋಮವಾರ ಭಾರತ ತನ್ನ ಎರಡನೇ ಇನ್ನಿಂಗ್ಸ್ ನಲ್ಲಿ ನಾಯಕ ವಿರಾಟ್ ಕೊಹ್ಲಿ ಮಿಂಚಿನ ಶತಕದ ನೆರವಿನಿಂದ 352 ರನ್ ಗಳಿಸಿ ಡಿಕ್ಲೇರ್ ಮಾಡಿಕೊಂಡಿತು. ಟೆಸ್ಟ್ ಕ್ರಿಕೆಟ್ ನಲ್ಲಿ 18 ಶತಕ ಬಾರಿಸಿದ ಕೊಹ್ಲಿ, ಅಂತರಾಷ್ಟ್ರೀಯ ಕ್ರಿಕೆಟ್ ನಲ್ಲಿ 50ನೇ ಶತಕ ಬಾರಿಸಿದರು.

ಭಾರತ ನೀಡಿದ 231 ರನ್ ಗುರಿಯನ್ನು ಬೆನ್ನತ್ತಿದ ಲಂಕಾ 7 ವಿಕೆಟ್ ಕಳೆದುಕೊಂಡು 75 ರನ್ ಗಳಿಸಿದ್ದಾಗ, ಕೊನೆಯ ದಿನದಾಟ ಮುಗಿದ ಕಾರಣ ಪಂದ್ಯ ಡ್ರಾ ಆಯಿತು. ಭುವನೇಶ್ವರ ಕುಮಾರ್ 4 ಹಾಗೂ ಮಹಮ್ಮದ್ ಶಮಿ 2 ವಿಕೆಟ್ ಪಡೆದರು.

ಮೊದಲ ದಿನ ಟಾಸ್ ಗೆದ್ದಿದ್ದ ಲಂಕಾ ಮೊದಲು ಬೌಲಿಂಗ್ ಆಯ್ದುಕೊಂಡಿತ್ತು. ಭಾರತ ತನ್ನ ಪ್ರಥಮ ಇನ್ನಿಂಗ್ಸ್ ನಲ್ಲಿ 172 ರನ್ ಗಳಿಗೆ ಆಲೌಟ್ ಆಗಿತ್ತು. ಶ್ರೀಲಂಕಾ ತನ್ನ ಪ್ರಥಮ ಇನ್ನಿಂಗ್ಸ್ ನಲ್ಲಿ 294 ರನ್ ಗಳಿಸಿ 122 ರನ್ ಮುನ್ನಡೆ ಸಾಧಿಸಿತ್ತು. ಎರಡನೇ ಇನ್ನಿಂಗ್ಸ್ ನಲ್ಲಿ ತಿರುಗೇಟ್ ನೀಡಿದ ಭಾರತ 352 ರನ್ ಸೇರಿಸಿ ಡಿಕ್ಲೇರ್ ಮಾಡಿಕೊಂಡು 231 ರನ್ ಗುರಿ ನೀಡಿತು.

ಪಂದ್ಯದಲ್ಲಿ ಒಟ್ಟು 8 ವಿಕೆಟ್ ಪಡೆದ ಭುವನೇಶ್ವರ್ ಕುಮಾರ್ ಪಂದ್ಯ ಶ್ರೇಷ್ಟ ಪ್ರಶಸ್ತಿಗೆ ಭಾಜನರಾದರು.

Leave a Reply

Your email address will not be published.

Social Media Auto Publish Powered By : XYZScripts.com