ಅಂತರಾಷ್ಟ್ರೀಯ Cricket ನಲ್ಲಿ ಕೊಹ್ಲಿ 50 ಸೆಂಚುರಿ ದಾಖಲೆ : ‘ಶತಕಗಳ ಅರ್ಧಶತಕ’

ಟೀಮ್ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಅಂತರಾಷ್ಟ್ರೀಯ ಕ್ರಿಕೆಟ್ ನಲ್ಲಿ 50 ಶತಕ ಬಾರಿಸಿದ ದಾಖಲೆ ಬರೆದಿದ್ದಾರೆ. ಸೋಮವಾರ ಕೋಲ್ಕತಾದ ಈಡನ್ ಗಾರ್ಡನ್ ಮೈದಾನದಲ್ಲಿ ಶ್ರೀಲಂಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಅಜೇಯ 104 ರನ್ ಗಳಿಸಿದ ವಿರಾಟ್ ಈ ದಾಖಲೆಯನ್ನು ಮೆರೆದಿದ್ದಾರೆ.

ಇದು ಟೆಸ್ಟ್ ಕ್ರಿಕೆಟ್ನಲ್ಲಿ ಕೊಹ್ಲಿಯ 18 ನೇ ಶತಕವಾಗಿದೆ. ಕೊಹ್ಲಿ ಇದುವರೆಗೆ ಏಕದಿನ ಪಂದ್ಯಗಳಲ್ಲಿ 32 ಶತಕ ಬಾರಿಸಿದ್ದಾರೆ. ಏಕದಿನ ಹಾಗೂ ಟೆಸ್ಟ್ ಸೇರಿ, ಅಂತರಾಷ್ಟ್ರೀಯ ಕ್ರಿಕೆಟ್ ನಲ್ಲಿ ವಿರಾಟ್ ಕೊಹ್ಲಿ ಹೆಸರಿನಲ್ಲಿ ಒಟ್ಟು 50 ಶತಕ ದಾಖಲಾಗಿವೆ. ವಿರಾಟ್ ಕೊಹ್ಲಿ 200 ಏಕದಿನ ಹಾಗೂ 62 ಟೆಸ್ಟ್ ಪಂದ್ಯಗಳನ್ನಾಡಿದ್ದಾರೆ. ಏಕದಿನ ಬ್ಯಾಟಿಂಗ್ ರ್ಯಾಂಕಿಂಗ್ ನಲ್ಲಿ ನಂ. 1 ಸ್ಥಾನದಲ್ಲಿರುವ ವಿರಾಟ್ ಕೊಹ್ಲಿ ಟೆಸ್ಟ್ ನಲ್ಲಿ 6ನೇ ಸ್ಥಾನದಲ್ಲಿದ್ದಾರೆ.

Image result for virat kohli sachin tendulkar

ಏಕದಿನ ಕ್ರಿಕೆಟ್ ನಲ್ಲಿ 9000 ರನ್ ಗಡಿ ದಾಟಿರುವ ಕೊಹ್ಲಿ ಟೆಸ್ಟ್ ನಲ್ಲಿ 5000 ರನ್ ಪೂರೈಸುವ ಸನಿಹದಲ್ಲಿದ್ದಾರೆ. ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ 100 ಶತಕಗಳ ದಾಖಲೆಯನ್ನು ಕೊಹ್ಲಿ ಮುಂಬರುವ ವರ್ಷಗಳಲ್ಲಿ ಮುರಿಯಲಿದ್ದಾರಾ ಎಂಬುದು ಅಭಿಮಾನಿಗಳಲ್ಲಿ ಮೂಡಿರುವ ಕುತೂಹಲವಾಗಿದೆ.

Leave a Reply

Your email address will not be published.

Social Media Auto Publish Powered By : XYZScripts.com