ಸಂಸತ್‌ ಚಳಿಗಾಲದ ಅಧಿವೇಶನದಲ್ಲಿ ತ್ರಿವಳಿ ತಲಾಖ್‌ ಮಂಡನೆಗೆ ಕೇಂದ್ರದಿಂದ ತಯಾರಿ

ದೆಹಲಿ : ಸುಪ್ರೀಂಕೋರ್ಟ್‌ ತ್ರಿವಳಿ ತಲಾಕ್‌ಗೆ ತಾತ್ಕಾಲಿಕ ನಿಷೇಧ ಹೇರಿದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಇದಕ್ಕಾಗಿ ವಿಧೇಯಕವನ್ನು ಜಾರಿಗೆ ತರಲು ನಿರ್ಧರಿಸಿದೆ.

ತ್ರಿವಳಿ ತಲಾಖ್ ಮಸೂದೆ ಕುರಿತಂತೆ ಪರಿಶೀಲನೆ ನಡೆಸಲು ಸಮಿತಿ ರಚಿಸಿದ್ದು, ಸಂಸತ್‌ನ ಚಳಿಗಾಲದ ಅಧಿವೇಶನದಲ್ಲಿ ಮಸೂದೆ ಮಂಡನೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಸುಪ್ರೀಂ ಕೋರ್ಟ್‌ನ ಆದೇಶದ ಬಳಿಕ ತ್ರಿವಳಿ ತಲಾಖ್‌ಗೆ ಕಾನೂನಿನ ಚೌಕಟ್ಟು ನೀಡಲು ಸರ್ಕಾರ ಚಿಂತಿಸಿದೆ ಎಂದು ಮೂಲಗಳು ತಿಳಿಸಿವೆ. ಸುಪ್ರೀಂಕೋರ್ಟ್‌ನ ಆದೇಶದ ಬಳಿಕವೂ ಅನೇಕ ತ್ರಿವಳಿ ತಲಾಖ್‌ ಪ್ರಕರಣ ದಾಖಲಾಗಿದ್ದವು. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಹೊಸ ವಿಧೇಯಕವನ್ನು ಜಾರಿಗೆ ತರಲು ನಿರ್ಧರಿಸಲಾಗಿದೆ.

 

Leave a Reply

Your email address will not be published.

Social Media Auto Publish Powered By : XYZScripts.com