Bangalore : ಕಚೇರಿಯ 10ನೇ ಮಹಡಿಯಿಂದ ಜಿಗಿದು ಟೆಕ್ಕಿ ಆತ್ಮಹತ್ಯೆ

ಬೆಂಗಳೂರು : ಗೋವಾ ಮೂಲದ ಟೆಕ್ಕಿಯೊಬ್ಬರು 10ನೇ ಅಂತಸ್ತಿನಿಂದ ಜಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಇವರು ಬೆಳ್ಳಂದೂರು ಬಳಿಯ ಕಾಡು ಬಿಸನಹಳ್ಳಿಯ ನೆಸ್ನಾ ಬ್ಯುಸಿನೆಸ್‌ ಪಾರ್ಕ್ ಬಳಿ ಘಟನೆ ನಡೆದಿದೆ. ಮೃತ ಟೆಕ್ಕಿಯನ್ನು ಗೀತಾಂಜಲಿ ಎಂದು ಗುರುತಿಸಲಾಗಿದೆ.
ಎಂದಿನಂತೆ ಕೆಲಸಕ್ಕೆಂದು ಬಂದ ಗೀತಾಂಜಲಿ ನೇರವಾಗಿ ಕಚೇರಿಯ 10ನೇ ಮಹಡಿಗೆ ಹೋಗಿ ಅಲ್ಲಿಂದ ಜಿಗಿದಿದ್ದಾರೆ. ಪೊಲೀಸರು ಆತ್ಮಹತ್ಯೆ ಎಂದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸಹೋದ್ಯೋಗಿಗಳ ಬಳಿಯೂ ವಿಚಾರಣೆ ನಡೆಸುತ್ತಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ ಎಂದು ಪೊಲೀಸರು ಹೇಳಿದ್ದಾರೆ.

Leave a Reply

Your email address will not be published.

Social Media Auto Publish Powered By : XYZScripts.com