ಸಹಪಾಠಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ನಾಲ್ಕು ವರ್ಷದ ಬಾಲಕ..!!

ದೆಹಲಿ : ತನ್ನ ಸಹಪಾಠಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಪ್ರಕರಣ ಸಂಬಂಧ ನಾಲ್ಕು ವರ್ಷದ ಬಾಲಕನನ್ನು ಬಂಧಿಸಲಾಗಿದೆ. ಸಂತ್ರಸ್ತ ಬಾಲಕಿಯ ಪೋಷಕರು ಬಾಲಕನ ವಿರುದ್ದ ದೂರು ದಾಖಲಿಸಿದ್ದಾರೆ.

ಬಾಲಕಿ ದ್ವಾರಕದ ಮ್ಯಾಕ್ಸ್‌ಫೋರ್ಟ್‌  ಶಾಲೆಯಿಂದ ಮನೆಗೆ ಬಂದ ಕೂಡಲೆ ಆಕೆಯ ದೇಹದ ಖಾಸಗಿ ಭಾಗದಲ್ಲಿ ನೋವುಂಟಾಗುತ್ತಿರುವುದಾಗಿ ಹೇಳಿದ್ದಾಳೆ. ಬಳಿಕ ಮರುದಿನ ನಡೆದ ವಿಷಯವನ್ನು ಪೋಷಕರಿಗೆ ತಿಳಿಸಿದ್ದಾಳೆ ಎಂದು ಪೋಷಕರು ದೂರಿನಲ್ಲಿ ತಿಳಿಸಿದ್ದಾರೆ. ಅಲ್ಲದೆ ಶಾಲೆಯಲ್ಲಿ ಲೈಂಗಿಕ ದೌರ್ಜನ್ಯ ನಡೆಯುವ ವೇಳೆ ಸಹಾಯಕ್ಕಾಗಿ ಕರೆದರೂ ಯಾರೂ ಅಲ್ಲಿರಲಿಲ್ಲ ಎಂದು ಬಾಲಕಿ ಹೇಳಿದ್ದಾಳೆ.

ಬಾಲಕಿಗೆ ವೈದ್ಯರು ಚಿಕಿತ್ಸೆ ನೀಡುತ್ತಿದ್ದು, ಬಲಕಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿರುವುದನ್ನು ದೃಢಪಡಿಸಿದ್ದಾರೆ.

 

 

Leave a Reply

Your email address will not be published.