ರಾಜ್ಯಸರ್ಕಾರದಿಂದ ಮೆಟ್ರೋ ಪ್ರಯಾಣಿಕರಿಗೆ ಮತ್ತೊಂದು ಭಾಗ್ಯ…..ಏನದು…?

ಬೆಂಗಳೂರು : ಸಿಲಿಕಾನ್‌ ಸಿಟಿಯ ಮೆಟ್ರೋ ಪ್ರಯಾಣಿಕರಿಗೆ ಸದ್ಯದಲ್ಲೇ ಮತ್ತೊಂದು ಸಿಹಿ ಸುದ್ದಿ ಸಿಗಲಿದೆ. ಮೆಟ್ರೋ ಬೋಗಿಗಳ ಸಂಖ್ಯೆ ಹೆಚ್ಚಿಸಲು ನಿರ್ಧರಿಸಲಾಗಿದ್ದು, ಡಿಸೆಂಬರ್‌ ಬಳಿಕ ಬೋಗಿಗಳನ್ನು ಹೆಚ್ಚಿಸುವ ಕುರಿತು ಮಾತುಕತೆ ನಡೆಯುತ್ತಿರುವುದಾಗಿ ತಿಳಿದುಬಂದಿದೆ.

ಬಿಇಎಂಎಲ್‌ ಸಂಸ್ಥೆಗೆ ಬೋಗಿಗಳ ಖರೀದಿಯನ್ನು ವಹಿಸಲಾಗಿದ್ದು, ಈಗಿರುವ ಮೂರು ಬೋಗಿಗಳನ್ನು ಆರಕ್ಕೆ ಹೆಚ್ಚಿಸಲು ನಿರ್ಧರಿಸಲಾಗಿದೆ. ಅಲ್ಲದೆ ಮೆಟ್ರೋ ಪ್ರಯಾಣಿಕರ ಸಂಖ್ಯೆ ಹೆಚ್ಚಿರುವ ಹಿನ್ನೆಲೆಯಲ್ಲಿ 3 ನಿಮಿಷಕ್ಕೊಂದು ಮೆಟ್ರೋ ರೈಲು ಬಿಡಲು ನಿರ್ಧರಿಸಲಾಗಿದೆ. ಹೆಚ್ಚುವರಿ ಬೋಗಿ ಬಂದ ಬಳಿಕ ಮಹಿಳೆಯರು ಹಾಗೂ ಮಕ್ಕಳಿಗಾಗಿ ಬೋಗಿ ಮೀಸಲಿಡುವುದಾಗಿ ಸಚಿವ ಕೆ.ಜೆ ಜಾರ್ಜ್‌ ಹೇಳಿದ್ದಾರೆ.

ಇದೇ ವೇಳೆ ಕನ್ನಡಿಗರಿಗೆ ಯಾವುದೇ ರೀತಿ ಅನ್ಯಾಯವಾಗದಂತೆ ಕ್ರಮ ವಹಿಸಲಾಗಿದೆ. ಈಗಾಗಲೇ ಮೆಟ್ರೋದಲ್ಲಿ 1500 ಮಂದಿ ಕನ್ನಡಿಗರಿಗೆ ಅವಕಾಶ ಕಲ್ಪಿಸಲಾಗಿದೆ. ಮುಂದಿನ ನೇಮಕಾತಿಯಲ್ಲೂ ಸಂಪೂರ್ಣವಾಗಿ ಕನ್ನಡಿಗರನ್ನೇ ನೇಮಕ ಮಾಡಿಕೊಳ್ಳುವುದಾಗಿ ಹೇಳಿದ್ದಾರೆ.

 

Leave a Reply

Your email address will not be published.