ಧಾರವಾಡದಲ್ಲಿ ನಡೆಯಲಿದೆ 84ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ

ಮೈಸೂರು : 84 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಧಾರವಾಡದಲ್ಲಿ ನಡೆಸಲು ನಿರ್ಧರಿಸಲಾಗಿದೆ. ಕನ್ನಡ ಸಾಹತ್ಯ ಪರಿಷತ್‌ ಅದ್ಯಕ್ಷ ಮನು ಬಳಿಗಾರ್‌ ಅವರ ಅಧ್ಯಕ್ಷತೆಯಲ್ಲಿ ಶನಿವಾರ ಪರಿಷತ್‌ನ ಕಾರ್ಯಕಾರಿ ಸಮಿತಿ ಸಭೆ ನಡೆದಿದ್ದು, ಈ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.

 

ಸಭೆಯಲ್ಲಿ ಮುಂದಿನ ಸಾಹಿತ್ಯ ಸಮ್ಮೇಳನ ನಡೆಸುವ ಸ್ಥಳದ ಕುರಿತು 7-8 ಜಿಲ್ಲೆಗಳ ಹೆಸರು ಪ್ರಸ್ತಾಪಿಸಲಾಯಿತು. ಬಳಿಕ ಎಲ್ಲರ ಅಭಿಪ್ರಾಯವನ್ನ ಕೇಳಲಾಯಿತು. ಅಂತಿಮವಾಗಿ ಮುಂದಿನ ಸಮ್ಮೇಳನವನ್ನು ಧಾರವಾಡದಲ್ಲಿ ನಡೆಸಲು ಸರ್ವಾನುಮತದಿಂದ ನಿರ್ಧರಿಸಲಾಯಿತು ಎಂದು ಮನು ಬಳಿಗಾರ್‌ ತಿಳಿಸಿದ್ದಾರೆ.

 

Leave a Reply

Your email address will not be published.

Social Media Auto Publish Powered By : XYZScripts.com