Cricket : ಟೆಸ್ಟ್ ನಲ್ಲಿ 300 ವಿಕೆಟ್ : ಆಸ್ಟ್ರೇಲಿಯಾದ ಡೆನಿಸ್ ಲಿಲ್ಲೀ ದಾಖಲೆ ಮುರಿದ ಅಶ್ವಿನ್

ನಾಗ್ಪುರದಲ್ಲಿ ನಡೆದ ಎರಡನೇ ಟೆಸ್ಟ್ ಪಂದ್ಯದಲ್ಲಿ ಭಾರತ ಶ್ರೀಲಂಕಾ ವಿರುದ್ಧ ಇನ್ನಿಂಗ್ಸ್ ಹಾಗೂ 239 ರನ್ ಜಯ ಗಳಿಸಿದೆ. ಸೋಮವಾರ ನಾಲ್ಕನೇ ದಿನದಾಟದಲ್ಲಿ ಟೀಮ್ ಇಂಡಿಯಾದ ಆಫ್ ಸ್ಪಿನ್ನರ್ ಆರ್.ಅಶ್ವಿನ್ ಟೆಸ್ಟ್ ಕ್ರಿಕೆಟ್ ನಲ್ಲಿ 300 ವಿಕೆಟ್ ಪಡೆದ ಸಾಧನೆ ಮಾಡಿದ್ದಾರೆ. ಆಸ್ಟ್ರೇಲಿಯಾದ ಶ್ರೇಷ್ಟ ಬೌಲರ್ ಡೆನಿಸ್ ಲಿಲ್ಲೀ ಅವರ ದಾಖಲೆಯನ್ನೂ ಸಹ ಅಶ್ವಿನ್ ಮುರಿದಿದ್ದಾರೆ.

ಡೆನಿಸ್ ಲಿಲ್ಲೀ ಆಸ್ಟ್ರೇಲಿಯಾದ ಪರವಾಗಿ ಆಡಿದ 56 ಟೆಸ್ಟ್ ಪಂದ್ಯಗಳಲ್ಲಿ 300 ವಿಕೆಟ್ ಪಡೆದಿದ್ದರು. ಆದರೆ ಅಶ್ವಿನ್ 54 ಪಂದ್ಯಗಳನ್ನಾಡಿ 300 ವಿಕೆಟ್ ಪಡೆದ ಸಾಧನೆ ಮಾಡಿ ಡೆನಿಸ್ ಅವರನ್ನು ಹಿಂದಿಕ್ಕಿದ್ದಾರೆ. ಈ ಮೂಲಕ ಅಶ್ವಿನ್ ಅಂತರಾಷ್ಟ್ರೀಯ ಟೆಸ್ಟ್ ಕ್ರಿಕೆಟ್ ನಲ್ಲಿ ಅತಿ ವೇಗವಾಗಿ 300 ವಿಕೆಟ್ ಪಡೆದ ಬೌಲರ್ ಎನಿಸಿಕೊಂಡು ವಿಶ್ವದಾಖಲೆ ಸೃಷ್ಟಿಸಿದ್ದಾರೆ.

Leave a Reply

Your email address will not be published.

Social Media Auto Publish Powered By : XYZScripts.com