Cricket : ವೇಳಾಪಟ್ಟಿ ಬಗ್ಗೆ ಅಸಮಾಧಾನ ತೋರಿದ ಕೊಹ್ಲಿಗೆ ವಿಶ್ರಾಂತಿ ನೀಡಿದ BCCI
ಡಿಸೆಂಬರ್ 10 ರಿಂದ ನಡೆಯಲಿರುವ ಶ್ರೀಲಂಕಾ ವಿರುದ್ಧ ಏಕದಿನ ಸರಣಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದ್ದು ನಾಯಕ ವಿರಾಟ್ ಕೊಹ್ಲಿಗೆ ವಿಶ್ರಾಂತಿ ನೀಡಲಾಗಿದೆ. ‘ ಬಿಡುವಿಲ್ಲದ ಕ್ರಿಕೆಟ್ ವೇಳಾಪಟ್ಟಿಯ ಕಾರಣದಿಂದಾಗಿ ಮುಂಬರುವ ದಕ್ಷಿಣ ಆಫ್ರಿಕಾ ಪ್ರವಾಸದ ಸಿದ್ಧತೆಗೆ ಸಮಯವೇ ಇಲ್ಲ ‘ ಎಂದು ಕೊಹ್ಲಿ ಅಸಮಾಧಾನ ವ್ಯಕ್ತಪಡಿಸಿದ್ದರು.
ವಿರಾಟ್ ಕೊಹ್ಲಿ ಅನುಪಸ್ಥಿತಿಯಲ್ಲಿ ಭಾರತವನ್ನು ರೋಹಿತ್ ಶರ್ಮಾ ತಂಡವನ್ನು ಮುನ್ನಡೆಸಲಿದ್ದಾರೆ. ಸಿದ್ಧಾರ್ಥ್ ಕೌಲ್ ಮೊದಲ ಬಾರಿಗೆ ಅವಕಾಶ ನೀಡಲಾಗಿದೆ. ಟಿ-20 ತಂಡದಲ್ಲಿದ್ದ ಶ್ರೇಯಸ್ ಅಯ್ಯರ್ ಅವರಿಗೆ ಏಕದಿನ ತಂಡದಲ್ಲಿಯೂ ಸ್ಥಾನ ನೀಡಲಾಗಿದೆ. ಲಂಕಾ ವಿರುದ್ಧ ಒಟ್ಟು 3 ಏಕದಿನ ಪಂದ್ಯಗಳು ನಡೆಯಲಿವೆ. ಎರಡನೇ ಟೆಸ್ಟ್ ಗೆ ವಿಶ್ರಾಂತಿ ಪಡೆದಿದ್ದ ಶಿಖರ್ ಧವನ್ ಮೂರನೇ ಟೆಸ್ಟ್ ಪಂದ್ಯಕ್ಕೆ ವಾಪಸಾಗಿದ್ದಾರೆ.
ಮೂರನೇ ಟೆಸ್ಟ್ ಗೆ ಭಾರತ ತಂಡ : ವಿರಾಟ್ ಕೊಹ್ಲಿ (ನಾಯಕ), ಎಮ್ ವಿಜಯ್, ಕೆ ಎಲ್ ರಾಹುಲ್, ಶಿಖರ್ ಧವನ್, ಚೇತೇಶ್ವರ ಪೂಜಾರಾ, ಅಜಿಂಕ್ಯ ರಹಾನೆ, ಮನೀಶ್ ಪಾಂಡೆ, ರೋಹಿತ್ ಶರ್ಮಾ, ವೃದ್ಧಿಮಾನ್ ಸಹಾ, ಆರ್ ಅಶ್ವಿನ್, ರವೀಂದ್ರ ಜಡೇಜಾ, ಕುಲದೀಪ್ ಯಾದವ್, ಮೊಹಮ್ಮದ್ ಶಮಿ, ಉಮೇಶ್ ಯಾದವ್, ಇಶಾಂತ್ ಶರ್ಮಾ, ವಿಜಯ್ ಶಂಕರ್.
ಏಕದಿನ ಸರಣಿಗೆ ಭಾರತ ತಂಡ : ರೋಹಿತ್ ಶರ್ಮಾ (ನಾಯಕ), ಶಿಖರ್ ಧವನ್, ಅಜಿಂಕ್ಯ ರಹಾನೆ, ಶ್ರೇಯಸ್ ಅಯ್ಯರ್, ಮನೀಶ್ ಪಾಂಡೆ, ಕೇದಾರ್ ಜಾಧವ್, ದಿನೇಶ್ ಕಾರ್ತಿಕ್, ಎಮ್ ಎಸ್ ಧೋನಿ, ಹಾರ್ದಿಕ್ ಪಾಂಡ್ಯ, ಅಕ್ಸರ್ ಪಟೇಲ್, ಕುಲದೀಪ್ ಯಾದವ್, ಯಜುವೇಂದ್ರ ಚಹಲ್, ಜಸ್ಪ್ರೀತ್ ಬುಮ್ರಾಹ್, ಭುವನೇಶ್ವರ್ ಕುಮಾರ್, ಸಿದ್ಧಾರ್ಥ್ ಕೌಲ್.