JDS ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿ ಪ್ರಜ್ವಲ್ ರೇವಣ್ಣ ನೇಮಕ

ಜ್ಯಾತ್ಯಾತೀತ ಜನತಾದಳ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಎಚ್.ಡಿ. ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿಯವರ ಆದೇಶದ ಮೇರೆಗೆ ರೇವಣ್ಣ ಪುತ್ರ, ಪ್ರಜ್ವಲ್ ರೇವಣ್ಣ ಅವರನ್ನು ಜ್ಯಾತ್ಯಾತೀತ ಜನತಾದಳ ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.

ನೇಮಕಾತಿ ಆದೇಶ್ವನ್ನು ಹೊರಡಿಸಿರುವ ಮಹಾ ಪ್ರಧಾನ ಕಾರ್ಯದರ್ಶಿ ಬಿ.ಎಮ್. ಫಾರೂಕ್ ‘ ತಾವು ಈ ಗುರುತರವಾದ ಜವಾಬ್ದಾರಿಯನ್ನು ವಹಿಸಿಕೊಂಡು, ಪಕ್ಷದ ತತ್ವ ಹಾಗೂ ಸಿದ್ಧಾಂತಗಳಿಗೆ ರಾಜ್ಯದಲ್ಲಿ ಜ್ಯಾತ್ಯಾತೀತ ಜನತಾದಳ ಪಕ್ಷವನ್ನು ಪರಿಣಾಮಕಾರಿಯಾಗಿ ಸಂಘಟಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗುತ್ತೀರಿ ಎಂದು ಆಶಿಸುತ್ತೇನೆ ‘ ಎಂದು ಪತ್ರದ ಮುಖಾಂತರ ತಿಳಿಸಿದ್ದಾರೆ.

Leave a Reply

Your email address will not be published.

Social Media Auto Publish Powered By : XYZScripts.com