ರಾಜ್ಯ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ರತ್ನಪ್ರಭಾ ನೇಮಕ

ಬೆಂಗಳೂರು : ರಾಜ್ಯದ ಪ್ರಮುಖ ಹುದ್ದೆಗಳೆರಡರಲ್ಲಿ ಮಹಿಳೆಯರು ಆಸೀನರಾಗಿದ್ದು, ಡಿಜಿ ಐಜಿಯಾಗಿ ನೀಲಮಣಿರಾಜು ಅವರನ್ನು ನೇಮಕ ಮಾಡಿದ ಬಳಿಕ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ರತ್ನ ಪ್ರಭಾ ಅವರನ್ನು ನೋಮಕ ಮಾಡಲಾಗಿದೆ.

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಸುಭಾಷ್‌ ಚಂದ್ರ ಕುಂಟಿಯಾ ಅವರ ಅಧಿಕಾರಾವಧಿ ನವೆಂಬರ್‌ 11ರಂದು ಮುಗಿದಿದ್ದು, ಆ ಹುದ್ದೆಗೆ ರತ್ನಪ್ರಭಾ ಅವರನ್ನು ನೇಮಿಸಲಾಗಿದೆ. ಇನ್ನು ಸಹಾಯಕ ಮುಖ್ಯ ಕಾರ್ಯದರ್ಶಿಯಾಗಿ ವಿಜಯ್ ಭಾಸ್ಕರ್‌ ಅವರನ್ನು ನೇಮಕ ಮಾಡಲಾಗಿದೆ.

ರತ್ನಪ್ರಭಾ ಅವರು ಇನ್ನು ಕೇವಲ 6ತಿಂಗಳವರೆಗೆ ಮಾತ್ರ ಕಾರ್ಯ ನಿರ್ವಹಿಸಲಿದ್ದು, ಮಾರ್ಚ್‌ 13ಕ್ಕೆ ನಿವೃತ್ತಿ ಹೊಂದಲಿದ್ದಾರೆ.

ರತ್ನಪ್ರಭಾ ದಲಿತ ಸಮುದಾಯಕ್ಕೆ ಸೇರಿದವರಾಗಿದ್ದು, ಆ ಕಾರಣದಿಂದಲೇ ಅವರನ್ನು ಆಯ್ಕೆ ಮಾಡಲಾಗಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

 

Leave a Reply

Your email address will not be published.

Social Media Auto Publish Powered By : XYZScripts.com