ತಮಿಳುನಾಡಿನಲ್ಲಿ ಓಕಿ ಚಂಡಮಾರುತದ ಅಬ್ಬರಕ್ಕೆ ನಾಲ್ಕು ಮಂದಿ ಬಲಿ

ಚೆನ್ನೈ : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಓಕಿ ಚಂಡಮಾರುತ ಬೀಸುತ್ತಿದೆ. ಚಂಡಮಾರುತದಿಂದಾಗಿ ಚೆನ್ನೈ ಜನತೆ ತತ್ತರಿಸಿಹೋಗಿದ್ದು, ನಾಲ್ವರು ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

ಮೃತರನ್ನು ರವೀಂದ್ರನ್‌, ಕಮರೇಸನ್‌, ಸರಸ್ವತಿ, ಅಲೆಕ್ಸಾಂಡರ್ ಎಂದು ಗುರುತಿಸಲಾಗಿದೆ. ಭಾರೀ ಮಳೆ ಹಿನ್ನೆಲೆಯಲ್ಲಿ ತಮಿಳುನಾಡಿನ ಟುಟಿಕಾರನ್ನ್, ತಿರುನಲ್ವೇಲಿ, ಕನ್ಯಾಕುಮಾರಿ, ವಿರುದುನಗರ್‌ ಜಿಲ್ಲೆಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಇನ್ನೂ ಮೂರು ದಿನಗಳ ಕಾಲ ತಮಿಳುನಾಡಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಜೊತೆಗೆ ಬೆಂಗಳೂರಿನ ಕೆಲ ಭಾಗಗಳಲ್ಲೂ ಸಾಧಾರಣ ಮಳೆಯಾಗುವ ಸಾಧ್ಯತೆ ಇರುವದಾಗಿ ಹೇಳಲಾಗುತ್ತಿದೆ.

 

Leave a Reply

Your email address will not be published.

Social Media Auto Publish Powered By : XYZScripts.com