ಎಐಸಿಸಿ ಅಧ್ಯಕ್ಷರಾಗಿ ರಾಹುಲ್ ಪಟ್ಟಾಭಿಷೇಕಕ್ಕೆ ಸ್ವಪಕ್ಷೀಯರಿಂದಲೇ ವಿರೋಧ

ಮುಂಬೈ : ರಾಹುಲ್‌ ಗಾಂಧಿಯವರಿಗೆ ಎಐಸಿಸಿ ಅಧ್ಯಕ್ಷ ಪಟ್ಟ ನೀಡುವ ವಿಚಾರ ಸಂಬಂಧ ಕಾಂಗ್ರೆಸ್‌ನಲ್ಲೇ ಭಿನ್ನಮತ ಸ್ಫೋಟಗೊಂಡಿದೆ. ಮಹತ್ವದ ಬೆಳವಣಿಗೆಯೊಂದರಲ್ಲಿ ಕಾಂಗ್ರೆಸ್‌ ನಾಯಕ ಶೆಹಜಾದ್‌ ಪೂನಾವಾಲಾ ರಾಹುಲ್ ಗಾಂಧಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡುವ ಸಂಬಂಧ ವಿರೋಧ ವ್ಯಕ್ತಪಡಿಸಿದ್ದಲ್ಲದೆ ಎಐಸಿಸಿ ಅಧ್ಯರ್ಷ ಸ್ಥಾನದ ಆಕಾಂಕ್ಷಿ ಎಂಬುದನ್ನು ಬಾಯ್ಬಿಟ್ಟಿದ್ದಾರೆ.

ಈ ಕುರಿತು ಖಾಸಗಿ  ವಾಹಿನಿಯೊಂದಿಗೆ ಮಾತನಾಡಿರುವ ಶೆಹಜಾದ್‌, ಮುಂದೆ ನಡೆಯಲಿರುವ ಕಾಂಗ್ರೆಸ್‌ ಅಧ್ಯಕ್ಷರ ಆಯ್ಕೆ ಎಂಬುದು ಸೆಲೆಕ್ಷನ್‌ ಅಷ್ಟೇ ಅದು ಎಲೆಕ್ಷನ್‌ ಅಲ್ಲ . ಸಂವಿಧಾನ ಬದ್ದವಾಗಿ ಆಯ್ಕೆ ಪ್ರಕ್ರಿಯೆ ನಡೆಯುತ್ತಿಲ್ಲ ಎಂದಿದ್ದಾರೆ.

ಜೊತೆಗೆ ಒಂದು ಕುಟುಂಬದಿಂದ ಒಬ್ಬ ವ್ಯಕ್ತಿಗೆ ಮಾತ್ರ ಟಿಕೆಟ್‌ ನೀಡಬೇಕು. ಅದು ರಾಹುಲ್ ಆಗಲಿ ಅಥವಾ ನಾನಾಗಲಿ. ಎಲ್ಲರಿಗೂ ಒಂದೇ ನ್ಯಾಯ ಇರಬೇಕು. ನನ್ನ ವಿರುದ್ಧ ಕ್ರಮ ಕೈಗೊಳ್ಳುತ್ತಾರೆ ಎಂಬುದರ ಕುರಿತು ನನಗೆ ಅರಿವಿದೆ. ಆದರೆ ನನಗೆ ಯಾವುದು ತಪ್ಪೆನಿಸುತ್ತದೋ ಅದರ ವಿರುದ್ದ ಮಾತನಾಡಿದ್ದರ ಬಗ್ಗೆ ಹೆಮ್ಮೆ ಇದೆ ಎಂದಿದ್ದಾರೆ.

ಮಹಾರಾಷ್ಟ್ರ ಕಾಂಗ್ರೆಸ್‌ನ ಕಾರ್ಯದರ್ಶಿಯಾಗಿರುವ ಶೆಹಜಾದ್‌, ಬುಧವಾರ ರಾಹುಲ್‌ ಗಾಂಧಿಯವರಿಗೆ ಪತ್ರ ಬರೆದಿದ್ದು, ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಆಗ್ರಹಿಸಿದ್ದರು.

 

 

 

Leave a Reply

Your email address will not be published.