ರಾಜ್ಯದ ನೂತನ ಮುಖ್ಯಕಾರ್ಯದರ್ಶಿಯಾಗಿ ರತ್ನಪ್ರಭಾ ಅಧಿಕಾರ ಸ್ವೀಕಾರ

ಬೆಂಗಳೂರು : ರಾಜ್ಯ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ಹಿರಿಯ ಐಎಎಸ್‌ ಅಧಿಕಾರಿ ಕೆ. ರತ್ನಪ್ರಭಾ ಇಂದು  ಅಧಿಕಾರ ಸ್ವೀಕರಿಸಿದ್ದಾರೆ. ಸುಭಾಷ್‌ ಚಂದ್ರ ಕುಂಟಿಯಾ ಅವರು ರತ್ನಪ್ರಭಾ ಅವರಿಗೆ ಅಧಿಕಾರ ಹಸ್ತಾಂತರಿಸಿದ್ದಾರೆ.

ಅಧಿಕಾರ ಸ್ವೀಕಾರ ಹಿನ್ನೆಲೆಯಲ್ಲಿ ವಿಧಾನ ಸೌಧದಲ್ಲಿ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಕಾರ್ಯಕ್ರಮದಲ್ಲಿ ಸುಭಾಷ್‌ ಚಂದ್ರಪ ಕುಂಟಿಯಾ ಅವರನ್ನು ಬೀಳ್ಕೊಡಲಾಯಿತು. ಅಧಿಕಾರ ಸ್ವೀಕರಿಸಿದ ಬಳಿಕ ರತ್ನ ಪ್ರಭಾ ಮಾತನಾಡಿದ್ದು, ಮುಖ್ಯ ಕಾರ್ಯದರ್ಶಿಯ ಹುದ್ದೆಯನ್ನು ನನಗೆ ನೀಡಿದ್ದಾರೆ. ಈ ಹುದ್ದೆಗೆ ತಕ್ಕಂತೆ ಕೆಲಸ ಮಾಡುತ್ತೇನೆ. ನನ್ನ ಕೆಲಸವನ್ನು ಜವಾಬ್ದಾರಿಯಿಂದ ನಿಭಾಯಿಸುತ್ತೇನೆಂಬ ನಂಬಿಕೆ ಇದೆ ಎಂದಿದ್ದಾರೆ. ಜೊತೆಗೆ ಮಹಿಳೆಯರ ರಕ್ಷಣೆ ಕುರಿತು ಮಾತನಾಡಿದ ರತ್ನಪ್ರಭಾ, ಮಹಿಳೆಯರ ವಿಚಾರದಲ್ಲಿ ಸಕಾರಾತ್ಮಕ ಬದಲಾವಣೆಯಾಗಬೇಕಿದೆ. ಎಲ್ಲಿ ಭಾವನೆಗಳಿರುತ್ತದೋ ಅಲ್ಲಿ ಮಾತ್ರ ನಾವು ಜವಾಬ್ದಾರಿಯಿಂದ ಕೆಲಸ ಮಾಡಲು ಸಾಧ್ಯ. ಆದ್ದರಿಂದ ನನಗೆ ವಹಿಸಿರುವ ಜವಾಬ್ದಾರಿಯನ್ನು ಸರಿಯಾಗಿ ನಿಭಾಯಿಸುತ್ತೇನೆಂಬ ನಂಬಿಕೆ ಇರುವುದಾಗಿ ಹೇಳಿದ್ದಾರೆ.

 

Leave a Reply

Your email address will not be published.

Social Media Auto Publish Powered By : XYZScripts.com