ದೇವೇಗೌಡರ ರಾಜಕೀಯ ನಿಲ್ಲಿಸಲು ಯಾರಿಂದಲೂ ಸಾಧ್ಯವಿಲ್ಲ : ಎಚ್‌ಡಿಡಿ

ರಾಮನಗರ : ನಮ್ಮಲ್ಲಿ ಹೊಂದಾಣಿಕೆ ರಾಜಕಾರಣ ಮಾಡುವ ಪ್ರಶ್ನೆಯೇ ಇಲ್ಲ. ಕರ್ನಾಟಕದಲ್ಲಿ ನನ್ನ ರಾಜಕೀಯಕ್ಕೆ 57 ವರ್ಷವಾಯಿತು. ನಾನಿನ್ನೂ ಬದುಕಿದ್ದೇನೆ. ಆದರೆ ಮೋದಿ ಅವರ ಸ್ಥಿತಿ ಏನಾಗುತ್ತಿದೆ ಎಂಬುದನ್ನು ನೋಡುತ್ತಿದ್ದೀರಿ ಎಂದು ಮಾಜಿ ಪ್ರಧಾನಿ ದೇವೇಗೌಡ ಹೇಳಿದ್ದಾರೆ.

ರಾಮನಗರದಲ್ಲಿಂದು ಮಾತನಾಡಿದ ಅವರು, ದೇವೇಗೌಡರ ರಾಜಕೀಯವನ್ನು ನಿಲ್ಲಿಸಲು ಯಾರಿಂದಲೂ ಸಾಧ್ಯವಿಲ್ಲ. ಜೆಡಿಎಸ್‌ ಬೆಳವಣಿಗೆ ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದಿದ್ದಾರೆ. ಇದೇ ವೇಳೆ ಜಿಡಿಎಸ್‌ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ವಿಚಾರ ಸಂಬಂಧ ಮಾತನಾಡಿದ ಅವರು, 224 ಕ್ಷೇತ್ರದ ಅಭ್ಯರ್ಥಿಗಳ ಪಟ್ಟಿಯನ್ನು ಕುಮಾರಸ್ವಾಮಿ ಬಿಡುಗಡೆ ಮಾಡಲಿದ್ದಾರೆ. ಚುನಾವಣೆಗೆ ಇನ್ನೂ ಮೂರು ತಿಂಗಳು ಬಾಕಿ ಇದೆ. ಮೊದಲೇ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದರೆ ಗೊಂದಲ ಆಗುವ ಸಾಧ್ಯತೆ ಇದೆ. ಆದ್ದರಿಂದ ಎಲ್ಲ ಸಿದ್ದವಾದ ಮೇಲೆ ಪಟ್ಟಿ ಬಿಡುಗಡೆ ಮಾಡುವುದಾಗಿ ಹೇಳಿದ್ದಾರೆ.

 

 

 

 

Leave a Reply

Your email address will not be published.

Social Media Auto Publish Powered By : XYZScripts.com