ಯುಪಿ ಸ್ಥಳೀಯ ಚುನಾವಣೆಯಲ್ಲಿ ಬಿಜೆಪಿ ಗೆಲುವು : ಕಾಂಗ್ರೆಸ್‌ಗೆ ಮುಖಭಂಗ

ಲಖನೌ : ಉತ್ತರ ಪ್ರದೇಶ ಸಿಎಂ ಆಗಿ ಯೋಗಿ ಆದಿತ್ಯನಾಥ್‌ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ನಡೆದ ಸ್ಥಳೀಯ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಭಾರಿಸಿದೆ. ಒಟ್ಟು ಇದ್ದ 16 ಸ್ಥಾನಗಳಲ್ಲಿ 14 ಸ್ಥಾನಗಳು ಬಿಜೆಪಿ ಪಾಲಾಗಿದ್ದು, ಇನ್ನೆರಡು ಸ್ಥಾನಗಳನ್ನು ಬಿಎಸ್‌ಪಿ ಗೆದ್ದುಕೊಂಡಿದೆ.

ಆದರೆ ಕಾಂಗ್ರೆಸ್‌ಗೆ ಒಂದೂ ಸ್ಥಾನ ದೊರಕದೆ ಭಾರೀ ಮುಖಭಂಗ ಉಂಟಾಗಿದೆ. ಪ್ರಧಾನಿ ಮೋದಿ ಪ್ರತಿನಿಧಿಸುತ್ತಿದ್ದ ವಾರಣಾಸಿ ಸೇರಿದಂತೆ 14 ಕ್ಷೇತ್ರಗಳಲ್ಲಿ ಬಿಜೆಪಿ ಹಿಡಿತ ಸಾಧಿಸಿದೆ. ಇನ್ನು ರಾಹುಲ್‌ ಗಾಂಧಿ ಸ್ಪರ್ಧಿಸುತ್ತಿದ್ದ ಅಮೇಥಿಯಲ್ಲೂ ಜನ ಕಾಂಗ್ರೆಸ್‌ಗೆ ಕೈಕೊಟ್ಟು ಕಮಲ ಹಿಡಿದಿದ್ದಾರೆ.

ಯೋಗಿ ಆದಿತ್ಯನಾಥ್ ಅವರಿಗೆ ಈ ಚುನಾವಣೆ ಅಗ್ನಿ ಪರೀಕ್ಷೆಯಾಗಿದ್ದು, ಇದು ಮೋದಿ ಅವರ ಕೆಲಸಕ್ಕೆ ಜನರು ಕೊಟ್ಟ ಬಹುಮಾನ. ಇದು ಮೋದಿಯವರಿಗೆ ಸಂದ ಜಯ ಎಂದು ಯೋಗಿ ಪ್ರತಿಕ್ರಿಯಿಸಿದ್ದಾರೆ.

ರಾತ್ರಿಯ ವೇಳೆಗೆ ಸಂಪೂರ್ಣ ಚಿತ್ರಣ ದೊರೆಯಲಿದೆ.

 

Leave a Reply

Your email address will not be published.

Social Media Auto Publish Powered By : XYZScripts.com