ಶೌಚಾಲಯ ನಿರ್ಮಾಣ ವಿಚಾರಕ್ಕೆ ಯುವತಿ ಆತ್ಮಹತ್ಯೆ ಪ್ರಕರಣ : CM ಗೆ HDK ಟ್ವೀಟ್‌

ದಾವಣಗೆರೆ : ಶೌಚಾಲಯ ನಿರ್ಮಾಣ ವಿಚಾರಕ್ಕೆ ದಾವಣಗೆರೆಯಲ್ಲಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ವಿಚಾರ ಸಂಬಂಧ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮಾಜಿ ಸಿಎಂ ಎಚ್‌.ಡಿ ಕುಮಾರಸ್ವಾಮಿ, ಸಿಎಂ ಸಿದ್ದರಾಮಯ್ಯ ಅವರಿಗೆ ಟ್ವೀಟ್ ಮಾಡಿದ್ದಾರೆ.

ದಾವಣಗೆರೆಯ ಹರಪ್ಪನಹಳ್ಳಿಯಲ್ಲಿ ಶೌಚಾಲಯ ನಿರ್ಮಾಣ ವಿಚಾರ ಸಂಬಂಧ ಜಗಳ ನಡೆದಿತ್ತು. ಈ ವೇಳೆ ಅನ್ನಪೂರ್ಣ ಎಂಬ ಮಹಿಳೆ ಸೀಮೇಎಣ್ಣೆ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಳು. ಈ ಸಂಬಂಧ ಎಚ್‌ಡಿಕೆ, ಸಿದ್ದರಾಮಯ್ಯ ಅವರಿಗೆ ಟ್ವೀಟ್‌ ಮಾಡಿದ್ದು, ಸ್ವಚ್ಛ ಭಾರತ ಅಭಿಯಾನದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಆಸಕ್ತಿ ವಹಿಸಿದ್ದರೂ ಲೋಪ ಕಾಣಿಸುತ್ತಿದೆ. ಅದಕ್ಕೆ ಈ ಪ್ರಕರಣ ಒಂದು ಉದಾಹರಣೆಯಷ್ಟೇ. ಬಡತನ, ಅಸಹಾಯಕತೆಯ ಲಾಭ ಪಡೆಯುತ್ತಿರುವವರು ಇನ್ನೂ ನಮ್ಮ ಸಮಾಜದಲ್ಲಿದ್ದಾರೆ ಎಂಬುದು ನಾವೆಲ್ಲರು ತಲೆ ತಗ್ಗಿಸುವ ವಿಚಾರ. ಆದ್ದರಿಂದ ಆಕೆಯ ಸಾವಿಗೆ ಕಾರಣವಾದ ವ್ಯಕ್ತಿಗಳನ್ನು ಕೂಡಲೆ ಬಂಧಿಸುವಂತೆ ಸೋಶಿಯಲ್ ಮೀಡಿಯಾದ ಮೂಲಕ ಆಗ್ರಹಿಸಿದ್ದಾರೆ.

 

 

Leave a Reply

Your email address will not be published.

Social Media Auto Publish Powered By : XYZScripts.com