ಓಖಿ ಚಂಡಮಾರುತಕ್ಕೆ ತತ್ತರಿಸಿದ ತಮಿಳುನಾಡು, ಕೇರಳ ಜನತೆ : ಒಟ್ಟು 12 ಸಾವು

ಚೆನ್ನೈ/ತಿರುವನಂತಪುರಂ:  ಲಕ್ಷದ್ವೀಪದತ್ತ ಸಾಗುತ್ತಿರುವ ಓಖಿ ಚಂಡ ಮಾರುತ ತಮಿಳು ನಾಡು ಹಾಗೂ ಕೇರಳದ ಜನರನ್ನು ತತ್ತರಿಸುವಂತೆ ಮಾಡಿದೆ. ಚಂಡಮಾರುತದಿಂದಾಗಿ ತಮಿಳುನಾಡು ಹಾಗೂ ಕೇರಳ ರಾಜ್ಯಗಳು ಅಕ್ಷರಶಃ ನಲುಗಿ ಹೋಗಿದ್ದು, ಜನ ಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.

ಹವಾಮಾನ ಇಲಾಖೆಯ ಪ್ರಕಾರ ಮುಂದಿನ 24 ಗಂಟೆಗಳಲ್ಲಿ ಚಂಡಮಾರುತದ ತೀವ್ರತೆ ಹೆಚ್ಚಾಗಲಿದ್ದು, ವರುಣನ ಆರ್ಭಟ ಜೋರಾಗುವುದಾಗಿ ಎಚ್ಚರಿಕೆ ನೀಡಲಾಗಿದೆ. ಈಗಾಗಲೆ ತಮಿಳುನಾಡು ಕೇರಳದಲ್ಲಿ ಭಾರೀ ಮಳೆಗೆ 12 ಮಂದಿ ಸಾವಿಗೀಡಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಶುಕ್ರವಾರ ಸಮುದ್ರದಲ್ಲಿ ಸಿಲುಕಿಕೊಂಡಿದ್ದ ಮೀನುಗಾರರನ್ನು ರಕ್ಷಣೆ ಮಾಡಲಾಗಿದೆ. ಅಲ್ಲದೆ ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ. ಸಮುದ್ರ ತೀರದಲ್ಲಿರುವ ಜನರು ಎಚ್ಚರಿಕೆಯಿಂದಿರುವಂತೆ ಕೇರಳ ಸಿಎಂ ಪಿಣರಾಯಿ ವಿಜಯನ್‌ ಸೂಚಿಸಿದ್ದಾರೆ.

ಭಾರೀ ಮಳೆಗೆ ಮರಗಳು, ವಿದ್ಯುತ್‌ ಕಂಬಗಳು ರಸ್ತೆಗುರುಳಿದ್ದು, ವಾರನ ಸವಾರರ ಪರದಾಟ ಹೇಳತೀರದಾಗಿದೆ. ತಗ್ಗು ಪ್ರದೇಶ ಹಾಗೂ ರಸ್ತೆಯ ಮೇಲೆಲ್ಲ ನೀರು ನಿಂತಿದ್ದು, ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

Leave a Reply

Your email address will not be published.

Social Media Auto Publish Powered By : XYZScripts.com