Cricket : ಲಾರಾ ದಾಖಲೆ ಮುರಿದ ಕೊಹ್ಲಿ : ನಾಯಕನಾಗಿ ಅತಿ ಹೆಚ್ಚು ದ್ವಿಶತಕ ಗಳಿಸಿದ ಖ್ಯಾತಿ

ದೆಹಲಿಯ ಫಿರೋಜ್ ಷಾ ಕೋಟ್ಲಾ ಮೈದಾನದಲ್ಲಿ ನಡೆಯುತ್ತಿರುವ ಮೂರನೇ ಟೆಸ್ಟ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಮತ್ತೊಂದು ದಾಖಲೆ ನಿರ್ಮಿಸಿದ್ದಾರೆ. ಮೊದಲ ದಿನ 5000 ರನ್ ಗಡಿ ದಾಟಿದ್ದ ಕೊಹ್ಲಿ ಎರಡನೇ ದಿನ, ವೆಸ್ಟ್ ಇಂಡೀಸ್ ನ ಶ್ರೇಷ್ಟ ಆಟಗಾರ ಬ್ರಿಯಾನ್ ಲಾರಾ ಅವರ ದಾಖಲೆಯನ್ನು ಮುರಿದಿದ್ದಾರೆ.

ವೃತ್ತಿಜೀವನದ 6ನೇ ದ್ವಿಶತಕ ಗಳಿಸಿದ ವಿರಾಟ್ ಕೊಹ್ಲಿ, ಟೆಸ್ಟ್ ಕ್ರಿಕೆಟ್ ನಲ್ಲಿ ಅತಿ ಹೆಚ್ಚು ದ್ವಿಶತಕಗಳನ್ನು ಬಾರಿಸಿದ ನಾಯಕ ಎಂಬ ಖ್ಯಾತಿಗೆ ಪಾತ್ರರಾಗಿದ್ದಾರೆ. ಈ ಮುಂಚೆ ಈ ದಾಖಲೆ ವೆಸ್ಟ್ ಇಂಡೀಸ್ ಮಾಜಿ ನಾಯಕ ಬ್ರಿಯಾನ್ ಲಾರಾ ಅವರ ಹೆಸರಿನಲ್ಲಿತ್ತು. ಬ್ರಿಯಾನ್ ಲಾರಾ ನಾಯಕನಾಗಿ 5 ದ್ವಿಶತಕ ಬಾರಿಸಿದ್ದರು.

ಅದಲ್ಲದೇ ವಿರಾಟ್ ಕೊಹ್ಲಿ, ಟೆಸ್ಟ್ ಕ್ರಿಕೆಟ್ ನಲ್ಲಿ ಭಾರತದ ಪರವಾಗಿ ಅತಿ ಹೆಚ್ಚು ದ್ವಿಶತಕ ಬಾರಿಸಿದವರ ಸಾಲಿನಲ್ಲಿ ಸಚಿನ್ ತೆಂಡೂಲ್ಕರ್, ವೀರೇಂದ್ರ ಸೆಹ್ವಾಗ್ ಅವರನ್ನು ಸರಿಗಟ್ಟಿದ್ದಾರೆ. ಸಚಿನ್ ತೆಂಡೂಲ್ಕರ್ ಹಾಗೂ ವೀರೆಂದ್ರ ಸೆಹ್ವಾಗ್ ಟೆಸ್ಟ್ ನಲ್ಲಿ 6 ಡಬಲ್ ಸೆಂಚುರಿ ಗಳಿಸಿದ್ದಾರೆ.

Leave a Reply

Your email address will not be published.

Social Media Auto Publish Powered By : XYZScripts.com